ಜಿಡೆಕಲ್ಲು ಸ.ಪ್ರ.ದ.ಕಾಲೇಜಿಗೆ ಸಮಾಜಶಾಸ್ತ್ರ ಉಪನ್ಯಾಸಕರನ್ನು ಶೀಘ್ರ ನೇಮಿಸುವಂತೆ ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

0

ಪುತ್ತೂರು: ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿ ಒಂದು ತಿಂಗಳು ಕಳೆದರೂ ಸಮಾಜಶಾಸ್ತ್ರ ವಿಭಾಗಕ್ಕೆ ಉಪನ್ಯಾಸಕರ ನೇಮಕಾತಿ ಆಗಿಲ್ಲ ಎಂದು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಶಾಸಕ ಸಂಜೀವ ಮಠಂದೂರುರವರಿಗೆ ಮನವಿ ಸಲ್ಲಿಸಿ ಅಗತ್ಯ ಕ್ರಮಕ್ಕೆ ಆಗ್ರಹಿಸಿದರು. ಕಳೆದ ಸೆಮಿಸ್ಟರ್‌ನಲ್ಲಿ ಇದ್ದ ಸಮಾಜಶಾಸ್ತ್ರ ಉಪನ್ಯಾಸಕರು ಬೇರೆ ಕಾಲೇಜಿಗೆ ವರ್ಗಾವಣೆಗೊಂಡ ಬಳಿಕ ಹೊಸ ಉಪನ್ಯಾಸಕರ ನೇಮಕಾತಿ ಆಗಿಲ್ಲ, ಈ ವಿಚಾರವನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಿಂದಿನ ಸೆಮಿಸ್ಟರ್‌ನಲ್ಲಿ ಪ್ರಥಮ ಬಿಎ ವಿದ್ಯಾರ್ಥಿಗಳು accouning for everyone? ವಿಷಯಕ್ಕೆ ಉಪನ್ಯಾಸಕರಿಲ್ಲದೆ ಸಂಕಷ್ಟ ಅನುಭವಿಸಿದ್ದಾರೆ. ಈ ಸಲ ಸಮಾಜಶಾಸ್ತ್ರ ಉಪನ್ಯಾಸಕರಿಲ್ಲದೆ ಪರದಾಡುವಂತಾಗಿದೆ. ಪರೀಕ್ಷೆಗಳು ಹತ್ತಿರ ಬರುತ್ತಿರುವಂತೆಯೇ ಉಪನ್ಯಾಸಕರು ಇಲ್ಲದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ. ಆದಷ್ಟು ಬೇಗ ಉಪನ್ಯಾಸಕರ ವ್ಯವಸ್ಥೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

 

ಮನವಿ ಸ್ವೀಕರಿಸಿದ ಶಾಸಕರು, ಮುಂದಿನ ಬುಧವಾರ ಕಾಲೇಜಿನಲ್ಲಿ ನಡೆಯುವ ಸಭೆಯಲ್ಲಿ ಈ ವಿಚಾರವನ್ನು ಪ್ರಮುಖವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ, ಸುಳ್ಯದಿಂದ ಪುತ್ತೂರಿಗೆ ಬೆಳಗಿನ ಹೊತ್ತಲ್ಲಿ ಬಸ್ ಸರಿಯಾಗಿ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ, ಬೆಳಗ್ಗೆ ೭:೩೦ ರಿಂದ ೯:೦೦ ರ ಅವಧಿಯಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಬೇಕು ಎಂದೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳಾದ ಮಹಮ್ಮದ್ ಜವಾದ್, ಕೀರ್ತಿಕಾ, ರಕ್ಷಿತಾ, ಸ್ವಾತಿ, ಎಡ್ವರ್ಡ್, ಹರ್ಷಿತ್, ವಿನೀತ್, ಪ್ರಜ್ವಲ್, ಗಣೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here