ನೆಲ್ಯಾಡಿ: ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್ ಅದಾಲತ್ ಹಮ್ಮಿಕೊಂಡಿದೆ. ಅದರಂತೆ ಜೂ.೧೮ರಂದು ಗೋಳಿತ್ತೊಟ್ಟು ಗ್ರಾಮ ಪಂಚಾಯತ್ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಕಾರ್ಯಪಾಲಕ ಇಂಜಿನಿಯರ್ ಹಾಗೂ ಮೆಸ್ಕಾಂ ಅಧಿಕಾರಿಗಳು ಈ ಅದಾಲತ್ನಲ್ಲಿ ಭಾಗವಹಿಸಲಿದ್ದು ಗ್ರಾಹಕರ ಸಮಸ್ಯೆಯನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸಿಕೊಡಲಿದ್ದಾರೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಅದಾಲತ್ನಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಸೂಕ್ತ ಪರಿಹರಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.