ಬಡಗನ್ನೂರುಃ ದ.ಕ.ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಈಶ್ವರಮಂಗಲ ಮತ್ತು ಬಡಗನ್ನೂರು ಗ್ರಾಮ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರಾ ಪರೀಕ್ಷೆ ಶಿಬಿರವು ಜೂ 18 ರಂದು ಬೆಳಗ್ಗೆ ಗಂ 10 ರಿಂದ 1ರ ತನಕ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸರ್ಕಾರಿ ಆಸ್ಪತ್ರೆಯ ನುರಿತ ನೇತ್ರ ತಜ್ಞರು ಭಾಗವಹಿಸಲಿದ್ದು ಉಚಿತ ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆಯ ಸಮಸ್ಯೆ ಇರುವವರಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿಕೊಡಲಾಗುವುದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ