ಕಾವು: ಮಾಡ್ನೂರು ಹಾ.ಉ.ಸ.ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ

0

 

ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಜೂ.17ರಂದು ಬೆಳಿಗ್ಗೆ ಸಂಘದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿಯವರು ಯೋಗ ದಿನಾಚರಣೆಯ ಮಹತ್ವ ತಿಳಿಸಿ ಬಳಿಕ ಸಾಮೂಹಿಕವಾಗಿ ಸರಳ ಯೋಗಾಭ್ಯಾಸ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುರೇಂದ್ರ ಬೋರ್ಕರ್ ನನ್ಯ, ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯ, ನಿರ್ದೇಶಕರುಗಳು, ಸಂಘದ ಸದಸ್ಯರುಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here