ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಅನಘ ಕೆ.ಎ.ರವರಿಗೆ ಸನ್ಮಾನ

0

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೇಂದ್ರ ಸರಕಾರ ಎಂಟು ವರ್ಷ ಪೂರ್ಣಗೊಳಿಸಿರುವ ನಿಟ್ಟಿನಲ್ಲಿ ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾಕ್ಷೇತ್ರದ ಸಾಧನೆಗಾಗಿ ನಗರ ಬಿಜೆಪಿ ವತಿಯಿಂದ ಅನಘ ಕೆ.ಎ.ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ತೆಂಕಿಲ ನಿವಾಸಿ ಅನಿಲ್ ಕುಮಾರ್ ಮತ್ತು ಕವಿತಾ ದಂಪತಿಯ ಪುತ್ರಿಯಾಗಿರುವ ಅನಘರವರು ಕ್ರೀಡಾಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಶಾಸಕ ಸಂಜೀವ ಮಠಂದೂರು ಸನ್ಮಾನಿಸಿ ಶುಭ ಹಾರೈಸಿದರು. ವಿವೇಕಾನಂದ ಆಂಗ್ಲಮಾಧ್ಯಮ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿನಿಯಾಗಿರುವ ಅನಘರವರು ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ 601 ಅಂಕಗಳಿಸಿದ್ದರು.

LEAVE A REPLY

Please enter your comment!
Please enter your name here