ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

0

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ರವರು ಫಲಿತಾಂಶ ಪ್ರಕಟಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಹಾಗೂ ಉಡುಪಿ 2ನೇ ಸ್ಥಾನ ಪಡೆದುಕೊಂಡಿದೆ ಈ ಬಾರಿ ರಾಜ್ಯದಲ್ಲಿ 61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದಾರೆ. 

ದ್ವಿತೀಯ ಪಿಯುಸಿ ಪರೀಕ್ಷೆಗೆ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಶೇ.68.72 ಬಾಲಕಿಯರು ಉತ್ತೀರ್ಣರಾಗಿದ್ದಾರೆ, ಶೇ.55.22 ಬಾಲಕರು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು ವಿದ್ಯಾರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ ಗಳಿಗೂ ಫಲಿತಾಂಶ ಬರಲಿದೆ. ಫಲಿತಾಂಶವು www.karresults.nic.in ವೆಬ್ ಸೈಟ್ ಗಳಲ್ಲಿ ಲಭ್ಯವಿದೆ.

ಫಲಿತಾಂಶ ಪರಿಶೀಲಿಸುವುದು ಹೇಗೆ?

ಅಧಿಕೃತ ವೆಬ್ ಸೈಟ್ www.karresults.nic.in ಓಪನ್ ಮಾಡಿ. ದ್ವಿತೀಯ ಪಿಯುಸಿ ಫಲಿತಾಂಸಗಳು 2022 ಕರ್ನಾಟಕ ಲಿಂಕ್ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಬ್ ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ 2022ರ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ತೆರೆದುಕೊಳ್ಳುತ್ತದೆ. ಪ್ರಿಂಟೌಟ್ ತೆಗೆದುಕೊಳ್ಳಿ. ಯಾವುದೇ ವ್ಯತ್ಯಾಸವಿದ್ದಲ್ಲಿ ಸಾಧ್ಯವಾದಷ್ಟು ಬೇಗ ನಿಮ್ಮ ಕಾಲೇಜನ್ನು ಸಂಪರ್ಕಿಸಿ

LEAVE A REPLY

Please enter your comment!
Please enter your name here