ದ್ವಿತೀಯ ಪಿಯುಸಿ ಫಲಿತಾಂಶ:  ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ 97% ಫಲಿತಾಂಶ

0

  • 14 ವಿದ್ಯಾರ್ಥಿನಿಯರಿಗೆ ಡಿಸ್ಟಿಂಕ್ಷನ್; 52 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ
ಪುತ್ತೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪದವಿಪೂರ್ವ ಕಾಲೇಜು ಶೇ.97 ಫಲಿತಾಂಶದ ಸಾಧನೆ ಮಾಡಿದೆ. ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 78 ವಿದ್ಯಾರ್ಥಿನಿಯರಲ್ಲಿ 75 ವಿದ್ಯಾರ್ಥಿನಿಯರು ತೇರ್ಗಡೆಗೊಂಡಿದ್ದಾರೆ.  14 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದು, 52 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿನಿಯರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು ಆ ಪೈಕಿ 55 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರಾದ ಫಾತಿಮತ್ ನಿಶಾ(580), ಖತೀಜಾ ಮರ್ಸತ್(572), ಫಾತಿಮತ್ ಸಪ್ನಾ(565), ಮುರ್ಷಿದಾ ಪಿ.ಎಂ(565), ಮರಿಯಂ ಫರ್ಸೀನಾ(563) ಫಾತಿಮತುಲ್ ರುಮೈಸಾ(549), ನುಸೈಬಾ ಎ(549), ಫಾತಿಮತ್ ಅಸ್ನಾ(545), ನುಝ್‌ಹತ್(534), ಅನೀಶಾ(523), ಹಮೀಮತ್ ನಿಶಾ(522), ಫಾತಿಮತ್ ತೈಬಾ(514), ನೆಬೀಸತ್ ಮಿಶ್ರಿಯಾ(513) ಅಂಕಗಳೊಂದಿಗೆ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ.
ಉಳಿದಂತೆ 35 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿನಿಯರು ತೃತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ಕಲಾ ವಿಭಾಗ:
ಕಲಾ ವಿಭಾಗದಲ್ಲಿ ಒಟ್ಟು 22 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು ಆ ಪೈಕಿ 20 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಆಯಿಶತ್ ರಾಫಿದ(527) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ. ಉಳಿದಂತೆ 17 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ

LEAVE A REPLY

Please enter your comment!
Please enter your name here