ಕುಕ್ಕಟ್ಟೆ ಶ್ರೀ ಕ್ಷೇತ್ರದಲ್ಲಿ ಯಶಸ್ವಿ ಬ್ರಹ್ಮಕಲಶೋತ್ಸವ – ಅಭಿನಂದನಾ ಸಭೆ

0

  • ಎಲ್ಲರ ಒಗ್ಗಟ್ಟಿನ ಫಲವಾಗಿ ಕಾರ್ಯಕ್ರಮ ಯಶಸ್ವಿ – ಜನಾರ್ದನ ಆಚಾರ್ಯ ಕಾಣಿಯೂರು
  • ಜವಾಬ್ದಾರಿಯನ್ನು ನಿರ್ವಹಿಸಿಕೊಂಡ ಹಿನ್ನಲೆಯಲ್ಲಿ ಯಶಸ್ವಿ ಕಾರ್ಯಕ್ರಮ – ರವೀಂದ್ರ ಆಚಾರ್ಯ ಇಳಂತಿಲ
  • ಎಲ್ಲರೂ ಮೆಚ್ಚುವ ರೀತಿಯಲ್ಲಿ ಬ್ರಹ್ಮಕಲಶೋತ್ಸವ ನಡೆದಿದೆ – ಬಾಲಕೃಷ್ನ ಆಚಾಯ್ ಮರೋಳಿ
  • ಯಶಸ್ವಿಯಾಗಿ ನಡೆಯಲು ಜನತೆಯ ಸಹಕಾರದಿಂದ ಸಾಧ್ಯವಾಗಿದೆ- ವಸಂತ ಗೌಡ ನಡುಬೈಲು

ಚಿತ್ರ: ಸುಧಾಕರ್ ಕಾಣಿಯೂರು

ಕಾಣಿಯೂರು: ಕುಕ್ಕಟ್ಟೆ ಶ್ರಿ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವವು ಯಶಸ್ವಿಯಾಗಿ ಸಂಭ್ರಮದಿಂದ ನಡೆದಿದೆ. ಎಲ್ಲರ ಒಗ್ಗಟ್ಟಿನ ಫಲವಾಗಿ ಕಾರ್ಯಕ್ರಮ ಯಶಸ್ವಿಯಾಗಿದೆ. ಯಶಸ್ವಿ ಬ್ರಹ್ಮಕಲಶೋತ್ಸವಕ್ಕೆ ಕೈಜೋಡಿಸಿದ ಪ್ರತಿಯೊಬ್ಬರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಕುಕ್ಕಟ್ಟೆ ಶ್ರಿ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು ಹೇಳಿದರು.

 

 

ಅವರು ಮುರುಳ್ಯ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಶ್ರೀ ದೇವರ ಶಿಲಾ ವಿಗ್ರಹ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದವರಿಗೆ ಕುಕ್ಕಟ್ಟೆ ಕ್ಷೇತ್ರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ದೈವಸ್ಥಾನಗಳನ್ನು ನಿರ್ಮಾಣ ಮಾಡಿದರೆ ನಮ್ಮ ಕೆಲಸ ಮುಗಿಯುವುದಿಲ್ಲ, ಜೊತೆಗೆ ನಿತ್ಯ ನಿರಂತರ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಮೂಲಕ ಕಾರ್ಯಯೋಜನೆಗಳನ್ನು ರೂಪಿಸುವುದು ಕೂಡ ಅಷ್ಟೆ ಅನಿವಾರ್ಯವಾಗುತ್ತದೆ ಎಂದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವೀಂದ್ರ ಆಚಾರ್ಯ ಇಳಂತಿಲ ಮಾತನಾಡಿ, ಬ್ರಹ್ಮಕಲಶೋತ್ಸವದಲ್ಲಿ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಶಕ್ತಿಮೀರಿ ಪಾಲ್ಗೊಂಡು ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುವ ನಿಟ್ಟಿನಲ್ಲಿ ಕಾರ್ಯಕ್ರಮದ ಯಶಸ್ವಿಗೆ ಕಾರಣಕರ್ತರಾಗಿದ್ದಿರಿ. ವಿಶೇಷ ಸಂಕಲ್ಪದೊಂದಿಗೆ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲು ತಮ್ಮ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿಕೊಂಡ ಹಿನ್ನಲೆಯಲ್ಲಿ ಪ್ರತಿಯೊಂದು ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದಿದೆ ಎಂದರು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ ಮರೋಳಿ ಮಾತನಾಡಿ, ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸುವ ಭಾಗ್ಯ ಎಲ್ಲರಿಗೂ ದೊರಕಿತ್ತು. ಇಡೀ ಊರಿಗೆ ಊರೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದು, ಮಾತ್ರವಲ್ಲ ಜನತೆ ಮೆಚ್ಚುವ ರೀತಿಯಲ್ಲಿ ಕಾರ್ಯಕ್ರಮ ನಡೆದಿದೆ ಎಂದರು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಧ್ಯಕ್ಷ ವಸಂತ ಗೌಡ ನಡುಬೈಲು ಮಾತನಾಡಿ, ಕುಕ್ಕಟ್ಟೆ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಲು ಎಲ್ಲಾ ಜನತೆಯ ಸಹಕಾರದಿಂದ ಸಾಧ್ಯವಾಗಿದೆ. ಬ್ರಹ್ಮಕಲಶೋತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರಣಕರ್ತರಾಗಿದ್ದಾರೆ ಎಂದರು. ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಜನಾರ್ದನ ಆಚಾರ್ಯ ಕುಕ್ಕಟ್ಟೆ, ಚಿನ್ನಯ್ಯ ಆಚಾರ್ಯ ಕುಕ್ಕಟ್ಟೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿಗಳಾದ ಬಾಲಕೃಷ್ಣ ಆಚಾರ್ಯ ಕುಕ್ಕಟ್ಟೆ, ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ ಹಾಗೂ ವಿವಿಧ ಸಮಿತಿ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here