ಆಲಂಕಾರು ದುರ್ಗಾಂಬಾ ಪ.ಪೂ.ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ.100, ಕಲಾವಿಭಾಗದಲ್ಲಿ ಶೇ.91 ಪಲಿತಾಂಶ

0

ಆಲಂಕಾರು: ಆಲಂಕಾರು ದುರ್ಗಾಂಬಾ ಪದವಿ ಪೂರ್ವ ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಮತ್ತು ಕಲಾ ವಿಭಾಗದಲ್ಲಿ ಶೇ.91 ಫಲಿತಾಂಶ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 13 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 11 ವಿದ್ಯಾರ್ಥಿಗಳಲ್ಲಿ ಸಾಯಿರಾಜ್ ಮನೋಜ್ ಡಿ.(523 ಅಂಕ) ಮತ್ತು ರಚನಾ ಎಂ.(535 ಅಂಕ) ರವರು ವಿಶೀಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here