ಪ್ರಗತಿ ಸ್ಟಡಿ ಸೆಂಟರ್‌ಗೆ ಶೇಕಡಾ 92 ಫಲಿತಾಂಶ

0

ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಒಟ್ಟು 16 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಒಟ್ಟು 72 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 20 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 16 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಪ್ರಾಂಶುಪಾಲ ಕೆ. ಹೇಮಲತಾ ಗೋಕುಲನಾಥ್ ತಿಳಿಸಿರುತ್ತಾರೆ. ಈ ಫಲಿತಾಂಶಕ್ಕೆ ಕಾರಣೀಭೂತರಾದ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕ ವೃಂದದವರಿಗೆ ಸಂಸ್ಥೆಯ ಸಂಚಾಲಕ ಗೋಕುಲನಾಥ್ ಪಿ.ವಿರವರು ಅಭಿನಂದನೆ ಸಲ್ಲಿಸಿ ಶುಭಹಾರೈಸಿದ್ದಾರೆ.

 

LEAVE A REPLY

Please enter your comment!
Please enter your name here