ಪುತ್ತೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ ಮತ್ತು ವಾಣಿಜ್ಯ ವಿಭಾಗದಲ್ಲಿ ತಲಾ 3 ರ್ಯಾಂಕ್ಗಳನ್ನು ಫಿಲೋಮಿನಾ ಪಿಯು ಕಾಲೇಜು ಗಳಿಸಿಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ ಕೃಪಾ ಎಸ್.ರೈಯವರು 592 ಅಂಕ ಪಡೆದು ರಾಜ್ಯದಲ್ಲಿ 7ನೇ ರ್ಯಾಂಕ್ ಹಾಗೂ ಕಾಲೇಜಿನಲ್ಲಿ ಪ್ರಥಮ ಸ್ಥಾನಿ, ವೈಷ್ಣವಿರವರು 590 ಅಂಕ ಪಡೆದು ರಾಜ್ಯದಲ್ಲಿ 9ನೇ ರ್ಯಾಂಕ್ ಹಾಗೂ ಕಾಲೇಜಿನಲ್ಲಿ ದ್ವಿತೀಯ ಸ್ಥಾನಿ, ರೋಹನ್ ಜಿ.ರವರು 589 ಅಂಕ ಪಡೆದು ರಾಜ್ಯದಲ್ಲಿ 10ನೇ ರ್ಯಾಂಕ್ ಹಾಗೂ ಕಾಲೇಜಿನಲ್ಲಿ ತೃತೀಯ ಸ್ಥಾನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶಾಂತೇರಿ ಶೆಣೈಯವರು 591 ಅಂಕ ಪಡೆದು ರಾಜ್ಯದಲ್ಲಿ 6ನೇ ರ್ಯಾಂಕ್ ಹಾಗೂ ಕಾಲೇಜಿನಲ್ಲಿ ಪ್ರಥಮ ಸ್ಥಾನಿ, ಸಿಮ್ರಾನ್ ತಾಜ್ರವರು 589 ಅಂಕ ಪಡೆದು ರಾಜ್ಯದಲ್ಲಿ 8ನೇ ಸ್ಥಾನ ಹಾಗೂ ಕಾಲೇಜಿನಲ್ಲಿ ದ್ವಿತೀಯ ಸ್ಥಾನಿ, ಅಬ್ದುಲ್ ಬಾಸಿದ್ರವರು 587 ಅಂಕ ಪಡೆದು ರಾಜ್ಯದಲ್ಲಿ 10ನೇ ರ್ಯಾಂಕ್ ಹಾಗೂ ಕಾಲೇಜಿನಲ್ಲಿ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ವೀರೇಂದ್ರ ಹೆಗ್ಡೆಯವರು 558 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಒಟ್ಟು 547 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 503 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 184 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 365 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಕಲಾ ವಿಭಾಗದಲ್ಲಿ ಶೇ.95, ವಾಣಿಜ್ಯ ವಿಭಾಗದಲ್ಲಿ ಶೇ.97 ಮತ್ತು ವಿಜ್ಞಾನ ವಿಭಾಗದಲ್ಲಿ ಶೇ.87 ಫಲಿತಾಂಶ ಬಂದಿರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.