ಕೊಣಾಲು ಸರಕಾರಿ ಪ.ಪೂ.ಕಾಲೇಜಿಗೆ ಶೇ. 96 ಫಲಿತಾಂಶ

0

ನೆಲ್ಯಾಡಿ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಡಬ ತಾಲೂಕಿನ ಕೊಣಾಲು ಸರಕಾರಿ ಪ.ಪೂ.ಕಾಲೇಜಿಗೆ ಶೇ.96 ಫಲಿತಾಂಶ ಬಂದಿದೆ.

ಕಾಲೇಜಿನಿಂದ ಪರೀಕ್ಷೆಗೆ ಹಾಜರಾದ 22 ವಿದ್ಯಾರ್ಥಿಗಳ ಪೈಕಿ 21 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.96 ಫಲಿತಾಂಶ ಲಭಿಸಿದೆ. ಇಬ್ಬರು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕೊಣಾಲು ನಿವಾಸಿ ಪೂವಪ್ಪ ಗೌಡ ಹಾಗೂ ಮೋಹಿನಿ ದಂಪತಿ ಪುತ್ರಿ ಕಾವ್ಯಶ್ರೀ 564, ಕೊಣಾಲು ನಿವಾಸಿ ಗುಮ್ಮಣ್ಣ ಗೌಡರವರ ಪುತ್ರಿ ಯಕ್ಷಿತಾ 555 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here