ಅಕ್ರಮ ಸಕ್ರಮ ಯೋಜನೆಯಲ್ಲಿ ಮತ್ತೆ ರೈತರಿಗೆ ಸಿಹಿ ಸುದ್ದಿ ನೀಡಿದ ಸರಕಾರ-ಅನಧಿಕೃತ ಸಾಗುವಳಿಯ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಇನ್ನೂ ಒಂದು ವರ್ಷ ಕಾಲಾವಕಾಶ

0

ಪುತ್ತೂರು:ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ.

ಸರಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿ ನಮೂನೆ -57ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಈ ಹಿಂದೆ ನೀಡಿದ ಆದೇಶದಲ್ಲಿ 26-05-2022ಆಧ್ಯಾದೇಶವನ್ನು ಬದಲಾವಣೆ ಮಾಡಿರುವ ಸರಕಾರ 30-05-2022ರಿಂದ ಒಂದು ವರ್ಷದ ಅವಧಿಗೆ ನಮೂನೆ-57ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಸಿ. ಬಲರಾಮ್ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here