ಪುತ್ತೂರು ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ

0

  • ಆನೆ ದಂತ ಸಾಗಿಸುತ್ತಿದ್ದ ಆರು ಮಂದಿ ಬಂಧನ

ಪುತ್ತೂರು: ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಪುತ್ತೂರು ವಲಯದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಅಂತರ್ ರಾಜ್ಯ ಕುಖ್ಯಾತ ದಂತಚೋರರನ್ನು ಬಂಧಿಸಿದ ಘಟನೆ ನಡೆದಿದೆ.


ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ಮಹಾವೀರ ಆಸ್ಪತ್ರೆಗೆ ತಿರುಗುವ ಜಂಕ್ಷನ್ ಬಳಿ ವಾಹನ ಅಡ್ಡಗಟ್ಟಿ ಆನೆ ದಂತ ಮತ್ತು ವಾಹನ ವಶಪಡಿಸಿಕೊಳ್ಳಲಾಗಿದ್ದು ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್‌ ಕುಮಾರ ಮತ್ತು ರತೀಶ ಎಂಬವರನ್ನು ಬಂಧಿಸಲಾಗಿದೆ. ಬಂಧಿತರು ತಮಿಳುನಾಡು ಮತ್ತು ಕೇರಳ ಮೂಲದವರಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.‌ ನ್ಯಾಯಾಲಯ ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.‌ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಕೆ. ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೈ.ಪಿ. ಕಾರ್ಯಪ್ಪರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಕಿರಣ್, ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಎಸ್.ಎನ್., ಶಿವಾನಂದ್ ಆಚಾರ್ಯ, ಪ್ರಕಾಶ್‌ ಬಿ.ಟಿ., ಕುಮಾರಸ್ವಾಮಿ, ಮೆಹಬೂಬ್ಪ್ರಸಾದ್, ಅರಣ್ಯ ರಕ್ಷಕರುಗಳಾದ ನಿಂಗರಾಜ್, ಸುಧೀರ್, ಸತ್ಯನ್‌, ದೀಪಕ್, ಉಮೇಶ್, ಇಲಾಖೆ ವಾಹನ ಚಾಲಕರಾದ ಜಗದೀಶ್ ಮತ್ತು ರೋಹಿತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here