ದ್ವಿತೀಯ ಪಿಯುಸಿ ಫಲಿತಾಂಶ: ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಗೆ ಶೇ.97 ಫಲಿತಾಂಶ

0

ನೆಲ್ಯಾಡಿ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ ಲಭಿಸಿದೆ. ಕಲಾ ವಿಭಾಗಕ್ಕೆ ಶೇ.95 ಹಾಗೂ ವಾಣಿಜ್ಯ ವಿಭಾಗಕ್ಕೆ ಶೇ.98.48 ಫಲಿತಾಂಶ ಲಭಿಸಿದೆ.


ಕಾಲೇಜಿನಿಂದ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 127 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಈ ಪೈಕಿ 123 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.97 ಫಲಿತಾಂಶ ಬಂದಿದೆ. 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 70 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 20 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 8 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗ:
ಕಾಲೇಜಿನಿಂದ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 66 ವಿದ್ಯಾರ್ಥಿಗಳ ಪೈಕಿ 65 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.98.48 ತೇರ್ಗಡೆ ಫಲಿತಾಂಶ ಬಂದಿದೆ. ಈ ಪೈಕಿ 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತೇಜಸ್ವಿನಿ 587, ಅಪೂರ್ವ 575, ಜುಬೈರ್ ಮಹಮ್ಮದ್ 555, ತಸ್ಮಿಯಾ ಪರ್ವೀನ್ 539, ಮೌಸಮಿ 535, ಸ್ವಸ್ತಿಕ್ ಎನ್.ಜೆ. 529, ಪ್ರಿಯಾ ಪಿ.ಎ. 520, ಗ್ರೀಷ್ಮಾ 519, ದೀಕ್ಷಾ 582, ದೀಕ್ಷಿತಾ 579, ಧನ್ಯ ಡಿ 573, ಸುಕನ್ಯ 554, ರಶ್ಮಿತ 548, ಪ್ರಥ್ವಿಕ್ 528, ವರುಣ್ 523, ಅವ್ವಮ್ಮ 523, ಸವಿತ ಡಿ.ಸೋಜ 531 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗ:
ಕಾಲೇಜಿನಿಂದ ಕಲಾವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳ ಪೈಕಿ 58 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.95 ಫಲಿತಾಂಶ ಬಂದಿದೆ. ಈ ಪೈಕಿ 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 34 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸಚಿನ್ ಕೆ.ಎಸ್.573, ಭವಿಷ್ಯ 565, ಕಾವ್ಯ 554, ರಿತೇಶ್ 525, ಪುಷ್ಪಲತಾ 521, ಕಾವ್ಯ ಜಿ.ಹೆಚ್. 516, ಅಂಜಲಿನ ತೋಮಸ್ 515, ಸ್ವಪ್ನ 515 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲೂ ಸಂಸ್ಥೆಯು ಉತ್ತಮ ಫಲಿತಾಂಶ ದಾಖಲಿಸುವಲ್ಲಿ ಶ್ರಮಿಸಿದ ವಿದ್ಯಾಸಂಸ್ಥೆಯ ಉಪನ್ಯಾಸಕ ವೃಂದದವರಿಗೆ ಹಾಗೂ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಶುಭಾಶಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here