ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಮಧ್ಯೆ ಪರಸ್ಪರ ಹಲ್ಲೆ ಆರೋಪ-ಇತ್ತಂಡಗಳ ಈರ್ವರು ಆಸ್ಪತ್ರೆಗೆ ದಾಖಲು

0

ವಿಟ್ಲ: ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಮಧ್ಯೆ ಪರಸ್ಪರ ಹಲ್ಲೆ ನಡೆದ ಘಟನೆ ಜೂ.19ರಂದು ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಶಾಲಾ ಸಮೀಪವಿರುವ ಬೊಳ್ಪಾದೆ ರಸ್ತೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಇತ್ತಂಡಗಳ ಈರ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರು ತನ್ನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ನಿವಾಸಿ ಪ್ರಶಾಂತ್ ಎಂಬವರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಘಟನೆಯ ಸ್ಥಾನ ಹಂಚಿಕೆ ಕಾರಣ ಎಂದು ಹೇಳಲಾಗುತ್ತಿದೆ ಯಾದರೂ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಸಾಲೆತ್ತೂರು ಭಾಗದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here