ಅಳಕೆಮಜಲು ಕಿ.ಪ್ರಾ. ಶಾಲೆಯಲ್ಲಿ ಬೆಳ್ಳಿ ಹಬ್ಬ ಆಚರಣೆ ಸಮಿತಿ‌ ರಚನೆ

0

ವಿಟ್ಲ: ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸುಮಲತಾರವರ ಅಧ್ಯಕ್ಷತೆಯಲ್ಲಿ ಬೆಳ್ಳಿ ಹಬ್ಬ ಸಮಿತಿಯನ್ನು ರಚಿಸಲಾಯಿತು.

ಬೆಳ್ಳಿಹಬ್ಬ ಸಮಿತಿಯ ಗೌರವ ಸಲಹೆಗಾರರಾಗಿ ಪಿ. ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು, ಅಬ್ದುರ್ರಹ್ಮಾನ್ ಹಾಜಿ (ಮಸ್ಕತ್) ಅಳಕೆಮಜಲು , ಸೋಮಶೇಖರ ಶೆಟ್ಟಿ ಅಳಕೆಮಜಲು, ಮೊಹಮ್ಮದ್ ಕುಂಞ, ಕೃಷ್ಣಪ್ಪ ಕೆಮನಾಜೆ, ಮಹಮ್ಮದ್ ಶಾಕಿರ್ ಅಳಕೆಮಜಲು ರವರನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಕಾರ್ಯಾಧ್ಯಕ್ಷರಾಗಿ ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಂ. ಸುಧೀರ್ ಕುಮಾರ್ ಶೆಟ್ಟಿ, ಅಧ್ಯಕ್ಷರಾಗಿ ಪದ್ಮನಾಭ ಸಪಲ್ಯರವರನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಸುಮಲತಾ , ಕಾರ್ಯದರ್ಶಿಯಾಗಿ ತಿರುಮಲೇಶ್ವರ, ಕೋಶಾಧಿಕಾರಿಯಾಗಿ ಶಿಕ್ಷಕರಾದ ಇಸ್ಮಾಯಿಲ್ ಕೆ.ರವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಚಿದಾನಂದ, ಇಬ್ರಾಹಿಂ ಬಾತಿಸ್, ಜಗದೀಶ್, ಪ್ರದೀಪ್ ರವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.

ಶಾಲೆಯು ಬೆಳೆದುಬಂದ ಹಾದಿಯ ಬಗ್ಗೆ ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು ಮಾತನಾಡಿದರು. ಕಾರ್ಯಕ್ರಮದಲ್ಲಿ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಪಲ್ಯ ರವರು ಬೆಳ್ಳಿಹಬ್ಬದ ಸವಿನೆನಪಿಗಾಗಿ ಪ್ರವೇಶದ್ವಾರವನ್ನು ಕೊಡುಗೆ ನೀಡುವುದಾಗಿ ಘೋಷಿಸಿದರು. ಹಾಜರಿದ್ದ ಎಲ್ಲಾ ಸದಸ್ಯರು ತಮ್ಮಿಂದಾಗುವ ಕೊಡುಗೆ ನೀಡುವ ಬಗ್ಗೆ ಭರವಸೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಧೀರ್, ಮಹಮ್ಮದ್ ಶಾಕಿರ್, ಚಿದಾನಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಶಿಕ್ಷಣ ಇಲಾಖೆಯ ಪ್ರತಿನಿಧಿ ಯಾಗಿ ಕಂಬಳಬೆಟ್ಟು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರವಿ ನಾಯ್ಕ್,  ಸುಗಂಧಿನಿ ಪೆಲತಿಂಜ, ಪ್ರದೀಪ್ ಉರಿಮಜಲು, ದೀಕ್ಷಿತ್ ಪುಂಡಿಕಾಯಿ, ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಬೆನೆಡಿಕ್ಟ ಮೆಂಡೊನ್ಸಾ ಸ್ವಾಗತಿಸಿ, ಶಿಕ್ಷಕಿ ರಾಜೀವಿ ವಂದಿಸಿದರು. ಶಿಕ್ಷಕಿಯರಾದ ಜಯಂತಿ ನಾಯ್ಕ ಹಾಗೂ ಅನುರಾಧ ಸಹಕರಿಸಿದರು. ಶಿಕ್ಷಕ ಇಸ್ಮಾಯಿಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here