ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ನೋಡಲ್ ಶಿಕ್ಷಕರ ಕಾರ್ಯಾಗಾರ

0

ಪುತ್ತೂರು:   ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಮಂಗಳೂರು ಮತ್ತು ಶ್ರೀ ರಾಮಕೃಷ್ಣ ಪ್ರೌಢಶಾಲೆ, ಪುತ್ತೂರು ಇವರ ಸಹಯೋಗದಲ್ಲಿ   ಜೂ.18ರಂದು ರಂದು ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇಲ್ಲಿ ಅಟಲ್ ಟಿಂಕರಿಂಗ್ ನೋಡಲ್ ಶಿಕ್ಷಕರ ಕಾರ್ಯಾಗಾರ ನಡೆಯಿತು.


ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮಂಗಳೂರು ಇದರ ಪ್ರಾಂಶುಪಾಲರು ಮತ್ತು ಉಪನಿರ್ದೇಶಕರು (ಅಭಿವೃದ್ಧಿ) ರಾಜಲಕ್ಷ್ಮಿ ಕೆ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

 


ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಯವರು ಮಾತನಾಡಿ ಅಟಲ್ ಅನುದಾನ ಬಿಡುಗಡೆಯಾದ ಮೇಲೆ ಶಾಲೆಯಲ್ಲಿ ಯಾವ ರೀತಿಯ ಚಟುವಟಿಕೆಗಳು ನಡೆದಿದೆ, ಸ್ಥಳೀಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ಎಷ್ಟರ ಮಟ್ಟಿಗೆ ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ವಿವರವಾಗಿ ವಿವರಿಸಿದರು. ಮುಖ್ಯ ಅತಿಥಿಗಳಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರು ಹಾಗೂ ಪುತ್ತೂರು ವಲಯದ ನೋಡಲ್ ಅಧಿಕಾರಿಗಳಾದ ಪೀತಾಂಬರ ಕೆ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶೋಭಾ ಜಿ ಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಉಪಸ್ಥಿತರಿದ್ದರು.

ನಂತರ ಕಾರ್ಯಾಗಾರದಲ್ಲಿ ಅಟಲ್ ಡ್ಯಾಶ್‌ಬೋರ್ಡ್ ಬಗ್ಗೆ ಸಂಸ್ಥೆಯ ಕಂಪ್ಯೂಟರ್ ಶಿಕ್ಷಕಿ ಚಿತ್ರಕಲಾ ಎಸ್, ಪಿ.ಎಫ್.ಎಂ.ಎಸ್. ಬಗ್ಗೆ ಸಂಸ್ಥೆಯ ಕಛೇರಿ ಸಹಾಯಕರಾದ ಗುಣಧರ್ ರೈ ಎನ್ ಹಾಗೂ ಆರ್ಡಿನೋ ಕೋಡಿಂಗ್‌ನ ಬಗ್ಗೆ ವಿವೇಕಾನಂದ ಆಂಗ್ಲ ಮಾಧ್ಯಮದ ಅಟಲ್ ನೋಡಲ್ ಶಿಕ್ಷಕ ಶಿವಪ್ರಸಾದ್ ಇವರು ತರಬೇತಿಯನ್ನು ನೀಡಿದರು. ಜಿಲ್ಲೆಯ ಅಟಲ್ ಶಿಕ್ಷಕರ ಸಮಸ್ಯೆಗಳ ಬಗ್ಗೆ ನೋಡಲ್ ಅಧಿಕಾರಿಯವರಾದ ವೇದಾವತಿ ಬಿ.ಕೆ. ಯವರಿಗೆ ಮಾಹಿತಿ ನೀಡಿ ಪರಿಹರಿಸುವಂತೆ ನೋಡಲ್ ಶಿಕ್ಷಕರು ವಿನಂತಿಸಿದರು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ನ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕರಾದ ವೇದಾವತಿ ಬಿ.ಕೆ. ಯವರು ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಎ ಯವರು ವಂದಿಸಿದರು. ಶಿಕ್ಷಕಿ ಸಂಧ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here