ದ್ವಿತೀಯ ಪಿಯುಸಿ; ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ.100, ವಿಜ್ಞಾನ ವಿಭಾಗದಲ್ಲಿ ಶೇ.97 ಫಲಿತಾಂಶ

0

ನೆಲ್ಯಾಡಿ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಹಾಗೂ ವಿಜ್ಞಾನ ವಿಭಾಗಕ್ಕೆ ಶೇ.97 ತೇರ್ಗಡೆ ಫಲಿತಾಂಶ ಲಭಿಸಿದೆ. ಸಂಸ್ಥೆಯಿಂದ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಒಟ್ಟು 64 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ 63 ವಿದ್ಯಾರ್ಥಿಗಳು ತೇರ್ಗಡೆಗೊಂಡು ಕಾಲೇಜಿಗೆ ಒಟ್ಟು ಶೇ.99 ಫಲಿತಾಂಶ ಬಂದಿದೆ. 14 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 46 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗ: ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ 34 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಟೀನಾ ತೋಮಸ್ 580, ಕೀರ್ತನಾ ಬಿ.ವಿ. 576, ತೇಜಸ್ ಮನ್ಹಕರ್ 573, ಟಿನ್ಸಿ ತೋಮಸ್ 570, ರಕ್ಷಾ 570, ಆರ್ಯ ಎನ್.ವರ್ಗೀಸ್ 564, ತೇಜಸ್ 557, ಲೆರಿನಾ ಮರಿಯಾಮಾಡ್ತ 548, ಜೀವಿತಾ 510 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ವಿಜ್ಞಾನ ವಿಭಾಗ: ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದ 30 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.97 ತೇರ್ಗಡೆ ಫಲಿತಾಂಶ ಬಂದಿದೆ. 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಆಪ್ತಾ ಶೆಟ್ಟಿ 543, ನಿಮ್ಯ ಟಿ.ಎಂ.542, ಶ್ರದ್ಧಾ 533, ಶ್ರದ್ಧಾ ಕೆ.ಶಾಜಿ 529, ಅನರ್ಘ್ಯ ಮರಿಯ 513 ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here