ವೀರಮಂಗಲ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ವೀರಮಂಗಲ ಸ.ಹಿ.ಪ್ರಾ.ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.  ಶ್ರೀ ಮಹಾವಿಷ್ಣು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣಗೌಡ ಡೆಬ್ಬೆಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.

ಗ್ರಾಮಪಂಚಾಯತ್ ಉಪಾಧ್ಯಕ್ಷ ಸುಧಾಕರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅನುಪಮ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಗುರು ತಾರಾನಾಥ ಸವಣೂರು ಸ್ವಾಗತಿಸಿ, ಶಿಕ್ಷಕಿ ಶೋಭಾ ಅವರು ವಂದಿಸಿದರು. ದೈ.ಶಿ.ಶಿ ಹೇಮ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಹರಿಣಾಕ್ಷಿ, ಕವಿತಾ, ಗಾಯತ್ರಿ ಶಾಲಾಭಿವೃದ್ದಿ ಸಮಿತಿಯ ಸುರೇಶ, ರಾಜೇಶ್ವರಿ ಹಾಗೂ ಪೋಷಕರು ಉಪಸ್ಥಿತರಿದ್ದರು. ಬಳಿಕ ಯೋಗಾಭ್ಯಾಸ ಮಾಡಲಾಯಿತು.

LEAVE A REPLY

Please enter your comment!
Please enter your name here