ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯು ಶಾಲಾ ಮುಖ್ಯಶಿಕ್ಷಕಿ ವೆನಿಶಾ ಬೀ. ಎಸ್. ಅಧ್ಯಕ್ಷತೆಯಲ್ಲಿ ನಡೆಯಿತು.

ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಮಾತನಾಡಿ ” ಯೋಗ ದಿನಾಚರಣೆಯು ಭಾರತದ ಸಾಂಸ್ಕತಿಕ ಪರಂಪರೆಯ ಪ್ರತೀಕ. ಯೋಗದಿಂದ ನಿರೋಗ. ಯೋಗದಿಂದ ಮಾನಸಿಕ ಸಮತೋಲನ ಸಾಧ್ಯ” ಎಂದರು. ವೇದಿಕೆಯಲ್ಲಿ ಶಾಲಾ ರಕ್ಷಕ – ಶಿಕ್ಷಕ ಸಂಘದ ನಿಕಟ ಪೂರ್ವ ಉಪಾಧ್ಯಕ್ಷ ರಮೇಶ್ ಕೆ. ವಿ, ಹಿರಿಯ ವಿದ್ಯಾರ್ಥಿ ಹಾಗೂ ಕೋಸ್ಟಲ್ ಹೋಂ ಮಾಲಕ ಸಂದೇಶ ರೈ, ಹಿರಿಯ ಶಿಕ್ಷಕಿ ಡೈನ ಸಿಕ್ವೇರಾ ಉಪಸ್ಥಿತರಿದ್ದರು. ಬಳಿಕ ಯೋಗ ಪ್ರತಿಜ್ಞೆ ಸ್ವೀಕರಿಸಿ, 500 ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ವೆನಿಶಾ ಬಿ. ಎಸ್. ಸ್ವಾಗತಿಸಿ, ಶಿಕ್ಷಕರಾದ ಬಾಲಕೃಷ್ಣ ಪೊರ್ದಾಲ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here