ಬಿಜೆಪಿ ನಗರ ಮಂಡಲದ ವತಿಯಿಂದ ಯೋಗ ಕಾರ್ಯಕ್ರಮ

0

ಪುತ್ತೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಯೋಗ ಕಾರ್ಯಕ್ರಮ ನಡೆಯಿತು. ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿರುವ ಆರ್ಟ್ ಆಪ್ ಲಿವಿಂಗ್‌ನ ಯೋಗ ಶಿಕ್ಷಕಿ ಶರಾವತಿ ರವಿನಾರಾಯಣ್ ಹಾಗೂ ಸಹ ಸಂಚಾಲಕಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಭಾವತಿಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಎಸ್ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ಉಪಾಧ್ಯಕ್ಷೆ ವಿದ್ಯಾ ಗೌರೀ, ಇಂದುಶೇಖರ್, ಕಾರ್ಯದರ್ಶಿಗಳಾದ ಅಶೋಕ್ ಹಾರಾಡಿ, ನಗರಸಭಾ ಸದಸ್ಯರಾದ ಗೌರಿ ಬನ್ನೂರು, ಶಶಿಕಲಾ ಸಿ.ಎಚ್ , ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಜಯಶ್ರೀ ನಾಯಕ್, ಜಿಲ್ಲಾ ಸಮಿತಿ ಸದಸ್ಯರಾದ ರಾಮದಾಸ್ ಹಾರಾಡಿ, ಕಚೇರಿ ಕಾರ್ಯದರ್ಶಿ ರತನ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here