ಇ.ಡಿ.ಯಿಂದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

0

ಪುತ್ತೂರು: ಕೇಂದ್ರ ಬಿಜೆಪಿ ದ್ವೇಷ ರಾಜಕಾರಣ, ತನಿಖಾ ಸಂಸ್ಥೆಗಳ ದುರುಪಯೋಗ ಹಾಗು ತನಿಖೆ ನೆಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪುತ್ತೂರು ಕಿಲ್ಲೆ ಮೈದಾನದಲ್ಲಿರುವ ಅಮರ್ ಜವಾನ್ ಸ್ಮಾರಕ ಜ್ಯೋತಿಯ ಬಳಿ ಪ್ರತಿಭಟನೆ ನಡೆಸಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವು ಹೊಸದಾಗಿ ಮಿಲಿಟರಿ ನೇಮಕಾತಿಗಾಗಿ ರೂಪಿಸಿರುವ ಅಗ್ನಿಪಥ್ ಯೋಜನೆಯನ್ನೂ ವಿರೋಧಿಸಲಾಯಿತು.


ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ತಮ್ಮ ಆಸ್ತಿಗಳನ್ನು ದೇಶಕ್ಕೆ ಬಿಟ್ಟುಕೊಟ್ಟಿದ್ದಾರೆ. ದೇಶದ ಆಸ್ತಿಯನ್ನು ಅವರು ಯಾವುದನ್ನೂ ಕೊಳ್ಳೆ ಹೊಡೆದಿಲ್ಲ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ಪ್ರಾಣ ತ್ಯಾಗ ಮಾಡಿದ್ದಾರೆ. ಇಂಥವರನ್ನು ತೇಜೋವಧೆ ಮಾಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಸ್ವಂತ ಆಸ್ತಿಯಲ್ಲ. ಅದು ಕಾಂಗ್ರೆಸ್ ಕಾರ್ಯಕರ್ತರು ದೇಣಿಗೆ ನೀಡಿರುವುದು ಅದನ್ನು ಅವರು ಸ್ವಂತಕ್ಕೆ ಬಳಸಿಕೊಂಡಿಲ್ಲ. ರಾಹುಲ್ ಅವರ ಪ್ರಭಾವವನ್ನು ಕುಗ್ಗಿಸಲು ಅವರಿಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಾವು ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರು ಪ್ರತಿಭಟನೆಯಲ್ಲಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ವಿವಿಧ ಜವಾಬ್ದಾರಿಯುತ ಸಂಘಟಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here