ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ವಿಶ್ವ ಯೋಗ ದಿನ – ಆಚರಣೆ

0

  • ಲಂಚ, ಭ್ರಷ್ಟಾಚಾರ ವಿರುದ್ಧ ಘೋಷಣೆ, ಪ್ರತಿಜ್ಞೆ ಸ್ವೀಕಾರ

 

 

ಪುತ್ತೂರು: ವಿಶ್ವ ಯೋಗ ದಿನದ ಅಂಗವಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಯೋಗ ಕೇಂದ್ರ ಪುತ್ತೂರು ಮತ್ತು ಸುದ್ದಿ ಸಮೂಹ ಸಂಸ್ಥೆಗಳು ಜಂಟಿಯಾಗಿ ಸಂಘಟಿಸಿರುವ ವಿಶ್ವ ಯೋಗ ದಿನ – ಆಚರಣೆಯು ಜೂ. 21 ರಂದು ದೇವಳದ ಸಭಾಭವನದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ಘೋಷಣೆ ಕೂಗಿ, ಪ್ರತಿಜ್ಞೆ ಸ್ವೀಕರಿಸಲಾಯಿತು.


ಬೆಳಿಗ್ಗೆ ಗಂಟೆ 5.30ರಿಂದ ಸರಳ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಸರಳ ಯೋಗಾಭ್ಯಾಸ ಮತ್ತು ಯೋಗಾಭ್ಯಾಸದ ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವಿವೇಕಾನಂದ, ಕಾಣಿಯೂರು ಪ್ರಗತಿ ಆಂಗ್ಲಮಾಧ್ಯಮ, ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.


ಕಾರ್ಯಕ್ರಮದಲ್ಲಿ ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಅಧ್ಯಕ್ಷತೆ ವಹಿಸಿದ್ದು, ಕಾಸರಗೋಡು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ರಾಮಚಂದ್ರ ಭಟ್ ಎನ್, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಪಿ.ಶಿವಾನಂದ, ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್ ಹರೀಶ್ ಅತಿಥಿಗಳಾಗಿ ಭಾಗವಹಿಸಿದ್ದರು. ಯೋಗ ಕೇಂದ್ರ ಪುತ್ತೂರು ಇದರ ಯೋಗ ಗುರು ಪ್ರಸಾದ್ ಪಾಣಾಜೆ ಮತ್ತು ವಿಶ್ವಯೋಗ ದಿನಾಚರಣೆ ಸಮಿತಿ ಪುತ್ತೂರು ಇದರ ಅಧ್ಯಕ್ಷ ಶ್ರೀಗಿರೀಶ್ ಮಳಿ ಯೋಗಾಭ್ಯಾಸದ ಪ್ರದರ್ಶನ ಮಾಡಿದರು.


ಲಂಚ, ಭ್ರಷ್ಟಾಚಾರ ವಿರುದ್ಧ ಘೋಷಣೆ, ಪ್ರತಿಜ್ಞೆ ಸ್ವೀಕಾರ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಯೋಗ ಕೇಂದ್ರ ಪುತ್ತೂರು ಮತ್ತು ಸುದ್ದಿ ಸಮೂಹ ಸಂಸ್ಥೆಗಳು ಜಂಟಿಯಾಗಿ ಸಂಘಟಿಸಿದ ವಿಶ್ವ ಯೋಗ ದಿನಾಚರಣೆಯಲ್ಲಿ ಸುದ್ದಿ ಜನಾಂದೋಲನ ವೇದಿಕೆ ಹಮ್ಮಿಕೊಂಡಿರುವ ಲಂಚ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲ ಸೂಚಿಸಿ ಘೋಷಣೆ ಕೂಗಿ ಪ್ರತಿಜ್ಞೆ ಸ್ವೀಕರಿಸಲಾಯಿತು. ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ವ್ಯವಸ್ಥಾಪಕ ನಿರ್ದೇಶಕ ಡಾ. ಯು.ಪಿಶಿವಾನಂದ ಅವರು ಸಭೆಯಲ್ಲಿ ಗಣ್ಯರಿಗೆ ಲಂಚ, ಭ್ರಷ್ಟಾಚಾರದ ಫಲಕ ನೀಡಿದರು.

LEAVE A REPLY

Please enter your comment!
Please enter your name here