ಪಾಣಾಜೆ ಸುಬೋಧ ಪ್ರೌಢ ಶಾಲೆಯಲ್ಲಿ ಯೋಗ ದಿನಾಚರಣೆ

0

ಪಾಣಾಜೆ: 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಸುಬೋಧ ಪ್ರೌಢ ಶಾಲೆಯಲ್ಲಿ  ಆಚರಿಸಲಾಯಿತು. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ  ಭಾರತಿ ಭಟ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಯೋಗದ ಮಹತ್ವವನ್ನು ವಿವರಿಸಿ ಶುಭ ಕೋರಿದರು. ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್.ಎಸ್.ಪಿ  ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಪ್ರಾರ್ಥಿಸಿ  ಮುಖ್ಯಗುರು ಶ್ರೀಪತಿ ಇಂದಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ನಿರ್ಮಲ ವಂದಿಸಿದರು. ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here