ಪುತ್ತೂರು: 8ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಲುವಾಗಿ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು ಅವರು ದೀಪ ಪ್ರಜ್ವಲಿಸಿ ಮಾತನಾಡಿ ಸಾವಿರಾರು ವರ್ಷಗಳಿಂದ ನಮ್ಮ ನೆಲದಲ್ಲಿ ಆಚರಣೆಯಲ್ಲಿರುವ ಯೋಗಾಭ್ಯಾಸಕ್ಕೆ ವಿಶ್ವ ಮಾನ್ಯತೆ ಸಿಕ್ಕಿದ್ದು ನಮ್ಮ ವಂದನೀಯ ಪ್ರಧಾನಿ ನರೇಂದ್ರ ಮೋದಿಯವರಿಂದ ಎಂದು ಸ್ಮರಿಸಿದರು. ಇಂದು ಯೋಗವು ಸರ್ವರೋಗ ನಿವಾರಕವಾಗಿ ನಮ್ಮೊಂದಿಗೆ ಇದ್ದು ಅದನ್ನು ನಾವು ನಿತ್ಯ ಪಾಲಿಸುವ ಮೂಲಕ ಆರೋಗ್ಯವಂತರಾಗಿರೋಣ ಎಂದರು.
ಮುಖ್ಯ ಅತಿಥಿಯಾಗಿದ್ದ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿಯವರು ಶುಭ ಹಾರೈಸಿದರು. ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಉಪ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಅವರು ವೇದಿಕೆಯಲ್ಲಿದ್ದರು. ಉಪನ್ಯಾಸಕಿ ಅಮೃತಾ ಎಸ್. ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಂತುನುಕೃಷ್ಣ ಕೆ.ಎ. ಅವರು ಮಂತ್ರೋಚ್ಛಾರಣೆ, ಶಿಕ್ಷಕಿ ಆಶಾಲತಾ ಎಂ. ವಂದನಾರ್ಪಣೆಗಳಲ್ಲಿ ಸಹಕರಿಸಿದರು. ಬಳಿಕ ನಡೆದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಆಳ್ವ ಮತ್ತು ಶಿಕ್ಷಕಿ ಪರಿಮಳ ನಿರ್ದೇಶನ ನೀಡಿದರು.