ಜೂ.24: ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕೇಂದ್ರ ಕಛೇರಿ ಕಟ್ಟಡ ಉದ್ಘಾಟನೆ

0

ಪುತ್ತೂರು: ನೂತನವಾಗಿ ನಿರ್ಮಾಣಗೊಂಡಿರುವ ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕೇಂದ್ರ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭವು ಜೂ.24ರಂದು ಪೂರ್ವಾಹ್ನ 10.30ಕ್ಕೆ ನಡೆಯಲಿದೆ.


ಈ ಬಗ್ಗೆ ಜೂ.21ರಂದು ಸುದ್ದಿ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ.ಎಸ್. ರಂಗನಾಥ್ ರೈ ಅವರು, ಕೇಂದ್ರ ಕಚೇರಿ ಕಟ್ಟಡವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ.ಎನ್, ರಾಜೇಂದ್ರಕುಮಾರ್ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ. ರೈತ ಸಹಕಾರ ಭವನವನ್ನು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಉದ್ಘಾಟನೆ ಮಾಡಲಿದ್ದಾರೆ. ನವೀಕೃತ ಗೋದಾಮು ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ನೆರವೇರಿಸಲಿದ್ದಾರೆ. ಆಡಳಿತ ಮಂಡಳಿ ಸಭಾಂಗಣವನ್ನು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟನೆಗೈಯಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ನಾಮಫಲಕ ಅನಾವರಣಗೈಯಲಿದ್ದಾರೆ. ಕಂಪ್ಯೂಟರ್ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಎಸ್.ಬಿ. ಜಯರಾಮ ರೈ ನೆರವೇರಿಸಲಿದ್ದಾರೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ, ದ. ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ. ನಾಯಕ್, ನಬಾರ್ಡ್ ಡಿಜಿಎಂ ಸಂಗೀತಾ ಕರ್ತ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪವಿತ್ರ ಡಿ. ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ. ಉಪಸ್ಥಿತರಿದ್ದರು.

ಇರ್ದೆ ಮತ್ತು ಬೆಟ್ಟಂಪಾಡಿ ಗ್ರಾಮದ ಎಲ್ಲಾ ಗೌರವಾನ್ವಿತ ಸದಸ್ಯರನ್ನು ಸೇರಿಸಿಕೊಂಡು ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಬ್ಯಾಂಕಿನ ಕಟ್ಟಡದ ಸವಲತ್ತುಗಳನ್ನು ಸದಸ್ಯರಿಗೆ ಉತ್ತಮ ರೀತಿಯಲ್ಲಿ ನೀಡಬೇಕು ಎನ್ನುವ ದೃಷ್ಟಿಕೋನವನ್ನು ಇಟ್ಟುಕೊಂಡು ಸಹಕಾರಿ ಸಂಘವು ಕಾರ್ಯಾಚರಿಸುತ್ತಿದೆ. ಎಲ್ಲಾ ವ್ಯವಸ್ಥೆಗಳು ಒಂದೇ ಸೂರಿನಡಿ ಲಭಿಸಬೇಕೆನ್ನುವ ಉದ್ದೇಶದಿಂದ ಕಟ್ಟಡವು ನಿರ್ಮಾಣಗೊಂಡಿದೆ. ಊಟೋಪಚಾರ ಸಹಿತವಾಗಿ ಕಾರ್ಯಕ್ರಮ ನಡೆಯಲಿದೆ ಎಂದು ಕೆ.ಎಸ್. ರಂಗನಾಥ್ ರೈ ಮಾಹಿತಿ ನೀಡಿದರು.

ಕೇವಲ 6ತಿಂಗಳ ಅವಧಿಯಲ್ಲಿ ಸುಮಾರು 12 ಸಾವಿರ ಚದರಡಿ ವಿಸ್ತೀರ್ಣದ ಕಟ್ಟಡ ತಲೆಯೆತ್ತಿದೆ. 3% ಬಡ್ಡಿಯಲ್ಲಿ ನಬಾರ್ಡ್‌ನಿಂದ 84 ಲಕ್ಷ ರೂ ಸಾಲ ಪಡೆಯಲಾಗಿದೆ. 1.5 ಕೋಟಿ ರೂ. ವೆಚ್ಚದಲ್ಲಿ ಕೆಲಸ ಕಾರ್ಯಗಳು ನಡೆದಿವೆ. ಮಾಸ್ಟರ್ ಪ್ಲಾನರಿ ಸಂಸ್ಥೆಯು ಕಟ್ಟಡವನ್ನು ನಿರ್ಮಿಸಿದೆ. ಆಕರ್ಷಕ ಇಂಟೀರಿಯರ್ ಡಿಸೈನಿಂಗ್‌ನ್ನು ಫೆನ್ಸಿ ಇಂಟೀರಿಯರ್‍ಸ್ ಸಂಸ್ಥೆಯು ಮಾಡಿದೆ. ವಿಶಿಷ್ಟವಾದ ವ್ಯವಸ್ಥೆಯಲ್ಲಿ ನೂತನ ಕಟ್ಟಡವನ್ನು ರಚಿಸಲಾಗಿದೆ.. ಹಲವು ಸಹಕಾರ ಸಂಘಗಳಿಗೆ ಭೇಟಿ ನೀಡಿ, ಹವಾನಿಯಂತ್ರಿತ ಕಟ್ಟಡವನ್ನು ನೀಡಬೇಕೆನ್ನುವ ದೃಷ್ಟಿಯಿಂದ ಕೆಳಗಿನ ಅಂತಸ್ತಿನಲ್ಲಿ ಗೋದಾಮು ನಿರ್ಮಿಸಲಾಗಿದೆ. ನೆಲ ಅಂತಸ್ತಿನಲ್ಲಿ ೩,೮೦೦ ಚದರಡಿ ವಿಸ್ತೀರ್ಣದ ಹವಾನಿಯಂತ್ರಿತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಸಿಬ್ಬಂದಿಗೆ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಆಡಳಿತ ಮಂಡಳಿ ಕಚೇರಿಯಿದೆ. ಪ್ರಥಮ ಮಹಡಿಯಲ್ಲಿ ರೈತರಿಗೆ ತರಬೇತಿ ನೀಡುವ ಸಲುವಾಗಿ ಟ್ರೈನಿಂಗ್ ಸೆಂಟರ್‌ನ್ನು ರಚಿಸಲಾಗಿದೆ. ಹಳೆಯ ಕಟ್ಟಡದಲ್ಲಿ ಇರುವ ಹಾಲ್‌ನ್ನು ಗ್ರಾಹಕರ ಅನುಕೂಲಕ್ಕಾಗಿ ವಿವಿಧ ಕಾರ್ಯಕ್ರಮಗಳಿಗೆ ನೀಡಲು ಮೀಸಲಿಡಲಾಗಿದೆ. ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳಿಗೆ ಒಂದೇ ರೀತಿಯ ತಂತ್ರಾಂಶ ಇರಬೇಕು ಎನ್ನುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಆಶಯದಂತೆ ಇದೇ ಪ್ರಥಮ ಬಾರಿಗೆ ರಾಜ್ಯದ ಸಹಕಾರಿ ಸಚಿವರು ಹೊಸ ತಂತ್ರಾಂಶವನ್ನು ಇಲ್ಲಿಂದಲೇ ಉದ್ಘಾಟಿಸಿ ಜಿಲ್ಲೆಗೆ ಸಮರ್ಪಿಸಲಿದ್ದಾರ                       

                                                                            -ಶಶಿಕುಮಾರ್ ರೈ ಬಾಲ್ಯೊಟ್ಟು, ನಿರ್ದೇಶಕರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್

 

ಇರ್ದೆ ಬೆಟ್ಟಂಪಾಡಿ ಭಾಗದ ಸದಸ್ಯರು, ಸದಸ್ಯೇತರರಿಗೆ ಉತ್ತಮ ಸೇವೆಯನ್ನು ಕೊಡಬೇಕೆನ್ನುವ ಕರ್ತವ್ಯದಿಂದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿಕೊಂಡು ಈ ಹೊಸ ಕಟ್ಟಡವನ್ನು ನಿರ್ಮಿಸಿದ್ದೇವೆ. ಎಲ್ಲಾ ವ್ಯವಸ್ಥೆಗಳನ್ನು ಒಂದೇ ಕಡೆಗಳಲ್ಲಿ ಕೇಂದ್ರೀಕರಿಸಿ ರಾಸಾಯನಿಕ ಗೊಬ್ಬರ, ಪಡಿತರ, ಕೊಂಕಣ್ ಗ್ಯಾಸ್, ಕ್ರಿಮಿನಾಶಕ ಹೀಗೆ ಎಲ್ಲಾ ಸೇವೆಗಳನ್ನು ಒದಗಿಸಲಿದ್ದೇವೆ. ಈ ಭಾಗದ ಜನತೆಯ ಸಹಕಾರದಿಂದ ಸಂಘವು ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ. ಸಂಘದ ಮಾಜಿ ಅಧ್ಯಕ್ಷ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸದಾ ಸಹಕಾರ ನೀಡುತ್ತಿದ್ದಾರೆ. ಸಂಘದ ಅಧ್ಯಕ್ಷರು, ನಿರ್ದೆಶಕರು, ಸಿಬ್ಬಂದಿಗಳು ಉತ್ತಮ ಸೇವೆ ನೀಡುತ್ತಾ ಸಹಕಾರ ರಂಗವನ್ನು ಮುನ್ನಡೆಸುತ್ತಿದ್ದಾರೆ.
   

                                            -ರಾಮಯ್ಯ ರೈ ಬಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

 

 

 

LEAVE A REPLY

Please enter your comment!
Please enter your name here