ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಐಕ್ಯೂ ಎಸ್ ಸಿ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ‘ಮಾನವೀಯತೆಗಾಗಿ ಯೋಗ’ ಘೋಷವಾಕ್ಯದೊಂದಿಗೆ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ.ಕೆ ರವೀಂದ್ರ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ವೇಳೆ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿದ್ಯಾರ್ಥಿಗಳು ಹೊರ ತರುತ್ತಿರುವ ಜ್ಞಾನಬಿಂಬ ಭಿತ್ತಿಪತ್ರಿಕೆಯ ‘ಯೋಗ ದಿನಾಚಾರಣೆ’ಯ ವಿಶೇಷ ಸಂಚಿಕೆಯನ್ನು ಪ್ರಾಂಶುಪಾಲರಾದ  ಅಕ್ಷತಾ ಎ ಪಿ ಅನಾವರಣಗೊಳಿಸಿದರು. ನಂತರ ಮಹಾವಿದ್ಯಾಲಯದ ಆಂಗ್ಲಭಾಷ ಪ್ರಾಧ್ಯಾಪಕಿ ಹಾಗೂ ಯೋಗಶಿಕ್ಷಕರಾಗಿರುವ ಸಂಧ್ಯಾ ಪಿ ಎಂ ಮಾತನಾಡಿ, ಯೋಗ ಕೇವಲ ಒಂದು ದಿನ ಮಾಡುವಂತಹದಲ್ಲ. ನಮ್ಮ ದೈನಂದಿನ ಎಲ್ಲಾ ಚಟುವಟಿಕೆಗಳು ಸಹ ಯೋಗವಾಗಿದೆ. ಪತಂಜಲಿಯ 8 ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಬಹುದು. ಇದರಿಂದ ಹಲವಾರು ಉಪಯೋಗಗಳು ಇವೆ ಎಂದು ಹೇಳಿದರು. ಯೋಗವೇ ಜೀವನ, ಯೋಗವನ್ನು ಕೇವಲ ಒಂದು ದಿನ ಮಾಡಿ ಬಿಡದೇ ಪ್ರತಿದಿನ ಯೋಗ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ ಎಂದು ಅವರು ಕರೆ ನೀಡಿದರು. ನಂತರ ವಿದ್ಯಾರ್ಥಿಗಳ ಜೊತೆಗೆ ಸಂವಾದ ಹಾಗೂ ಪ್ರಾಯೋಗಿಕವಾಗಿ ಯೋಗವನ್ನು ಸಂಧ್ಯಾ ಪಿ ಎಂ ಹಾಗೂ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ಸಂಯೋಜಕ ಎಂ.ಕೆ ನವೀನ್ ಕುಮಾರ್ ನೇತೃತ್ವದಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಎಂ.ಕೆ ನವೀನ್ ಕುಮಾರ್, ಸಹ ಸಂಯೋಜಕರಾದ ತಿಲಕ್, ವಿದ್ಯಾರ್ಥಿ ಸಂಯೋಜಕರಾದ ಅಜಿತ್ ಕುಮಾರ್ ಮತ್ತು ಶ್ರಾವ್ಯ ಬಿ ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರೇಖಾ ಕೆ, ಕಾನೂನು ಸಹಾಯಕ ಪ್ರಾಧ್ಯಾಪಕರಾದ ಸಂಗೀತಾ ಎಸ್ ಎಂ, ಕೌಶಿಕ್ ಸಿ, ಕು. ಶ್ರೀರಕ್ಷಾ, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಿಕಾಂತ ರೈ ಅನಿಕೂಟೆಲ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಜಿತೇಶ್ ಸ್ವಾಗತಿಸಿ, ವಿದ್ಯಾರ್ಥಿನಿ ಅಕ್ಷಿತಾ ವಂದಿಸಿದರು. ವಿದ್ಯಾರ್ಥಿನಿ ಯಶಸ್ವಿನಿ ಪ್ರಾರ್ಥಿಸಿ, ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.