ದೇಶೀ ಶಿಕ್ಷಣಕ್ಕೆ ಹೆಚ್ಚಿನಒತ್ತು ನೀಡಬೇಕು :ಡಾ. ಕಲ್ಲಡ್ಕ ಪ್ರಭಾಕರ ಭಟ್

0

  • ವಿವೇಕಾನಂದ ವಿದ್ಯಾವರ್ಧಕ ಸಂಘ ವಿವೇಕಾನಂದ ಮಹಾವಿದ್ಯಾಲಯದ ಆಶ್ರಯದಲ್ಲಿ ಅಭಿನಂದನೆ

ಪುತ್ತೂರು : ನಮ್ಮ ನೆಲದ ಶಿಕ್ಷಣಕ್ಕೆ ಪ್ರಾಶಸ್ತ್ಯ ಸಿಗಬೇಕು, ಹಾಗೇ ದೇಶದ ಇತಿಹಾಸದ ಸತ್ಯಗಳನ್ನು ಬಿಚ್ಚಿಡುವ ಪ್ರಯತ್ನ ಪಠ್ಯ ಪುಸ್ತಕಗಳಿಂದ ಆಗಬೇಕು. ಜೊತೆಗೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವಂತ ವಿಚಾರಗಳನ್ನು ಒದಗಿಸುವ ಬಗ್ಗೆ ಸಂಸ್ಥೆ ಚಿಂತಿಸಬೇಕು. ಅಷ್ಟೇ ಅಲ್ಲದೆ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಪ್ರತಿಯೊಬ್ಬರೂ ಸಂಸ್ಥೆಯ ಇಂದಿನ ಯಶಸ್ಸಿಗೆ ಕಾರಣಿಕರ್ತರು ಎಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಮಹಾವಿದ್ಯಾಲಯದ ಆಶ್ರಯದಲ್ಲಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜು ಅಟೋನೊಮಸ್ ಆಗುವ ನಿಟ್ಟಿನಲ್ಲಿ ಶ್ರಮ ವಹಿಸಿದ ಎಲ್ಲಾ ಅಧ್ಯಾಪಕರಿಗೂ ಸಹಕರಿಸಿದ ಎಲ್ಲರಿಗೂ ಅಭಿನಂದಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿ ಮಾತನಾಡಿದರು.

ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ ನೂತನ ಶಿಕ್ಷಣ ನೀತಿ ಅಳವಡಿಸುವಿಕೆ ತುಂಬಾ ಸಹಕಾರಿಯಾಗಿದ್ದು, ಸಾಮಾಜಿಕ ಮೌಲ್ಯಗಳು ಕ್ಷೀಣಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಪ್ರಯತ್ನವಾಗಬೇಕು ಎಂದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ ಎಂ. ಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿಗಳಿಗೆ ಭವಿ? ರೂಪಿಸುವ ಶಿಕ್ಷಣ ನೀಡುವ ಸಂಕಲ್ಪ ನಮ್ಮದಾಗಿದೆ ಎಂದರು. ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ. ಎನ್ ಪ್ರಸ್ತಾವನೆಗೈದರು. ಕಾಲೇಜಿನ ಪ್ರಾಚಾರ್ಯ ಪ್ರೊ ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಐಕ್ಯೂಎಸಿ ಘಟಕದ ಸಂಯೋಜಕ ಶಿವಪ್ರಸಾದ್ ಕೆ. ವಂದಿಸಿ, ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್. ನಿರೂಪಿಸಿದರು.

LEAVE A REPLY

Please enter your comment!
Please enter your name here