ಜೂ.23, 24: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ, ವಾರ್ಷಿಕೋತ್ಸವ

0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಮತ್ತು ಕಾಲೇಜು ವಾರ್ಷಿಕೋತ್ಸವ ವಿಬ್‌ಜಯಾರ್-2022  ಸಮಾರಂಭ ಜೂ.23 ಹಾಗೂ 24 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಜೂ.23ರಂದು ಬೆಳಗ್ಗಿನಿಂದ ವಿದ್ಯಾರ್ಥಿಗಳ ವರ್ಷವಾರು ಪ್ರತಿಭಾ ಪ್ರದರ್ಶನ ಕಾರ್ಯಕ್ರಮ, ಸಂಜೆ 3 ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಬಹುಮಾನ ವಿತರಣೆ ಮಾಡಲಿದ್ದಾರೆ. ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ವಿಭಾಗಗಳಲ್ಲಿ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಜೂ.೨೪ರಂದು ಬೆಳಿಗ್ಗೆ ನಡೆಯುವ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಸೋನಾ ಗ್ರೂಪ್ ಬೆಂಗಳೂರು ಇದರ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಜ್ಞನಾರಾಯಣ ಕಮ್ಮಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಕೆ.ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರು, ಪ್ರಾಂಶುಪಾಲರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ ರ‍್ಯಾಂಕ್ ಗಳಿಸಿಕೊಂಡಿರುವ ಕಾಲೇಜಿನ ಹೆಮ್ಮೆಯ ವಿದ್ಯಾರ್ಥಿಗಳಾದ ರಂಜನ್ ಮತ್ತು ಕೃತಿಕಾ ಅವರನ್ನು ಸನ್ಮಾನಿಸಲಾಗುವುದು. ಪ್ರತಿ ವಿಭಾಗದಲ್ಲಿಯೂ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here