ಪುತ್ತೂರು : ವಿದ್ಯಾರ್ಥಿಗಳಲ್ಲಿ ಪಠ್ಯದ ಜೊತೆಗೆ, ದೈಹಿಕ ಮತ್ತು ಮಾನಸಿಕ ಏಕಾಗ್ರತೆ ಹಾಗೂ ಕ್ರಿಯಾಶೀಲತೆಯನ್ನು ಹೆಚ್ಚಿಸುವ ಸಲುವಾಗಿ, ನೆಹರು ನಗರದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (CBSE)ಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾರತಿ ಜಯರಾಮ್ ಹಾಗೂ ವಿದ್ಯಾರಾಜ್ ಇವರು ಉಪಸ್ಥಿತರಿದ್ದು, ಯೋಗಾಭ್ಯಾಸದ ಪ್ರಯೋಜನಗಳನ್ನು ತಿಳಿಸುತ್ತಾ , ಆಸನಗಳೊಂದಿಗೆ ಪ್ರಾತ್ಯಕ್ಷಿಕೆ ನೀಡಿದರು.
ಶಾಲಾ ಆಡಳಿತ ಮಂಡಳಿ ಸದಸ್ಯರಾದ ವಿಜಯಾನಂದ ಕೈಂತಜೆ , ಮುಖ್ಯೋಪಾಧ್ಯಾಯಿನಿ ಸಿಂಧು ವಿ.ಜಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆ, ಸ್ವಾಗತ ಭಾಷಣ ಮತ್ತು ವಂದನಾರ್ಪಣೆಯನ್ನು ಕ್ರಮವಾಗಿ ಶಾಲಾ ವಿದ್ಯಾರ್ಥಿನಿಯರಾದ ಆಪ್ತ ಚಂದ್ರಮತಿ ಮುಳಿಯ, ಸಿರಿ ಹಾಗೂ ಶ್ರೀಲಕ್ಷ್ಮಿ ನೆರವೇರಿಸಿದರು.