ಕೃಷ್ಣನಗರದಲ್ಲಿ ಡಿವೈಡರ್‌ಗೆ ಡಿಕ್ಕಿಯಾದ ರಿಕ್ಷಾ – ಚಾಲಕ ಗಂಭೀರ

0

ಪುತ್ತೂರು: ಆಟೋ ರಿಕ್ಷಾವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಜೂ. 23ರಂದು ಬೆಳಿಗ್ಗೆ ನಡೆದಿದೆ.

ಸೇಡಿಯಾಪು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಕೃಷ್ಣನಗರದಲ್ಲಿ ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಚಾಲಕ ಸೇಡಿಯಾಪು ನಿವಾಸಿ ಶಿವಪ್ಪ ಎಂಬವರಿಗೆ ತೀವ್ರ ಗಾಯವಾಗಿದೆ. ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here