ನೆಲ್ಯಾಡಿ: ಗೋಳಿತ್ತಟ್ಟು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ವಿಶ್ವ ಯೋಗದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಮುಖ್ಯಗುರು ಜಯಂತಿ ಬಿ.ಎಂ.ರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಯೋಗವನ್ನು ಯೋಗ ದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ, ನಮ್ಮ ದೈನಂದಿನ ಜೀವನದಲ್ಲಿ ಜೀವನದ ಅವಿಭಾಜ್ಯ ಅಂಗವಾಗಿ ಪ್ರತಿದಿನವೂ ನಿಯಮಿತವಾಗಿ ಅಳವಡಿಸಿಕೊಂಡರೆ ನಮ್ಮ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಎಲ್ಲಾ ವಿಧದ ರೋಗಗಳಿಂದ ಮುಕ್ತಿ ಹೊಂದಬಹುದು ಮತ್ತು ನಮ್ಮ ಆಯುಷ್ಯವನ್ನು ವೃದ್ಧಿಗೊಳಿಸಲು ಸಾಧ್ಯವಾಗುತ್ತದೆಂದು ತಿಳಿಸಿದರು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಗೋಪಾಲ ಗೌಡರವರು ಉದ್ಘಾಟಿಸಿ ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ನಮ್ಮ ದೇಶಕ್ಕಿದ್ದು, ಯೋಗವನ್ನು ನಮ್ಮ ಜೀವನದ ಭಾಗವಾಗಿ ಸ್ವೀಕರಿಸುವುದರೊಂದಿಗೆ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ನಾವು ದೈಹಿಕವಾಗಿ ಹಾಗೂ ಮಾನಸಿಕವಾಗಿ ಬಲಿಷ್ಠರಾಗುತ್ತೇವೆಂದು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕ ಜೋನ್ ಕೆ.ಪಿ.ರವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ಬೆಳಿಗ್ಗೆ 10 ರಿಂದ 12.30ರ ನತಕ ಯೋಗಾಸನದ ವಿವಿಧ ಆಸನಗಳನ್ನು ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಸಕ್ರಿಯವಾಗಿ ಭಾಗವಹಿಸಿ ಸಹಕರಿಸಿದರು. ಶಾಲಾ ಶಿಕ್ಷಕಿ ತೇಜಸ್ವಿ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿದರು. ಸೀಮ ವಂದಿಸಿದರು.