ಬೆಟ್ಟಂಪಾಡಿ ಕಾಲೇಜು ತರಗತಿಯೊಳಗೆ ಹಿಜಾಬ್ – ಶಾಸಕರಿಗೆ ದೂರು

0

ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿ ನಡೆಯುತ್ತಿರುವ ಸಂದರ್ಭದಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬರುತ್ತಿರುವ ಕುರಿತು ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ಶಾಸಕರಿಗೆ ದೂರು ನೀಡಿದ್ದಾರೆ.


ಹಿಜಾಬ್ ಧರಿಸಿ ಪಾಠ ಕೇಳುವಂತಿಲ್ಲ ಎಂದು ಹೈಕೋರ್ಟ್ ಅದೇಶವಿದ್ದರೂ ನಮ್ಮ ಕಾಲೇಜಿನಲ್ಲಿ ಕಾನೂನು ಉಲ್ಲಂಘಿಸಿ ಹಿಜಾಬ್‌ನನ್ನು ಧರಿಸಿದ್ದಾರೆ. ಈ ಕುರಿತು ಶಾಲಾ ಪ್ರಾಂಶುಪಾಲರಿಗೆ ಸೂಚನೆ ನೀಡುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here