ಗೋಳಿತ್ತೊಟ್ಟು ಗ್ರಾ.ಪಂ.ಸಾಮಾಜಿಕ ಪರಿಶೋಧನೆ ಗ್ರಾಮಸಭೆ

0

 

ನೆಲ್ಯಾಡಿ: ಗೋಳಿತ್ತೊಟ್ಟು ಗ್ರಾಮ ಪಂಚಾಯತ್‌ನ 2021-22ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮತ್ತು 14 ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಜೂ.೨೩ರಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆ ವಹಿಸಿದ್ದ ಸಾಮಾಜಿಕ ಅರಣ್ಯ ಇಲಾಖೆ ಪುತ್ತೂರು ವಲಯ ಅರಣ್ಯಾಧಿಕಾರಿ ಪಿ.ಕೆ.ವಿದ್ಯಾರಾಣಿಯವರು ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಅಭಿವೃದ್ಧಿ ಕೆಲಸ ಮಾಡಬಹುದಾಗಿದೆ. ಗ್ರಾಮಸ್ಥರು ಯೋಜನೆಯ ಕುರಿತು ಗ್ರಾಮ ಪಂಚಾಯಿತಿಯಿಂದ ಮಾಹಿತಿ ಪಡೆದುಕೊಂಡು ಅನುಷ್ಠಾನಗೊಳಿಸಬೇಕು. ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದಲೂ ಉದ್ಯೋಗ ಖಾತರಿ ಯೋಜನೆಯಡಿ ಅನುದಾನ ಲಭ್ಯವಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು. ಗ್ರಾ.ಪಂ.ಅಧ್ಯಕ್ಷ ಜನಾರ್ದನ ಪಟೇರಿಯವರು ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರು ಸಲಹೆ, ಸಹಕಾರ ನೀಡಬೇಕು. ಗ್ರಾಮ ಪಂಚಾಯಿತಿಯಿಂದ ಸಿಗಬಹುದಾದ ಯಾವುದೇ ಸವಲತ್ತು, ಮಾಹಿತಿಗಳನ್ನು ತಮ್ಮ ವಾರ್ಡ್‌ನ ಸದಸ್ಯರಿಂದ ಪಡೆದುಕೊಳ್ಳಬಹುದು ಎಂದರು ಹೇಳಿದರು. ಕಡಬ ತಾ.ಪಂ.ನ ಭರತ್‌ರಾಜ್‌ರವರು ಮಾತನಾಡಿ, ಪ್ರತಿ ಗ್ರಾಮ ಪಂಚಾಯತ್‌ನಲ್ಲೂ ಅಮೃತಸರೋವರ ಯೋಜನೆಗೆ ಅವಕಾಶವಿದೆ. ಸರಕಾರಿ ಕೆರೆ ಹೂಳೆತ್ತಲು ಉದ್ಯೋಗ ಖಾತ್ರಿ ಯೋಜನೆಯ ಅನುದಾನ ಬಳಕೆ ಮಾಡಬಹುದಾಗಿದೆ. ಯೋಜನೆಯಿಂದ ಸಿಗುವ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದು ಹೇಳಿದರು.

ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ಪ್ರವೀಣ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷೆ ಶೋಭಾಲತಾ, ಪಿಡಿಒ ಜಗದೀಶ್ ನಾಯ್ಕ್, ಇಂಜಿನಿಯರ್ ಮನೋಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಚಂದ್ರಾವತಿ ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು.

ವಿವಿಧ ಚರ್ಚೆ:
ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಗ್ರಾಮಸ್ಥರು ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು. ಕೆಲವೊಂದು ಕಾಮಗಾರಿಗಳ ದಾಖಲೆ ಪರಿಶೀಲನೆಯೂ ನಡೆಸಿದರು. ಗ್ರಾಮಸ್ಥರಾದ ರಘು ಪಾಲೇರಿ, ಅಬ್ದುಲ್ಲಾ ಕುಂಞಿ ಕೊಂಕೋಡಿ, ಎಪಿಎಂಸಿ ಸದಸ್ಯ ಕುಶಾಲಪ್ಪ ಗೌಡ ಅನಿಲ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡರು. ಗ್ರಾ.ಪಂ.ಸದಸ್ಯರಾದ ಪದ್ಮನಾಭ ಪೂಜಾರಿ, ಬಾಲಕೃಷ್ಣ ಗೌಡ, ಕೆ.ಬಾಬು ಪೂಜಾರಿ, ಹೇಮಲತಾ, ಶ್ರುತಿ ಪಿ., ಜಾನಕಿ, ಸವಿತಾ ಕೆ., ಜೀವಿತಾ ಪೆರಣ, ಗುಲಾಬಿ, ವಾರಿಜಾಕ್ಷಿ, ಪ್ರಜಲ, ನೋಣಯ್ಯ ಗೌಡ ಡೆಬ್ಬೇಲಿ, ಶಿವಪ್ರಸಾದ್ ಹಾಗೂ ಉದ್ಯೋಗ ಖಾತರಿ ಯೋಜನೆ ಫಲಾನುಭವಿಗಳು, ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಗ್ರಾ.ಪಂ.ಸಿಬ್ಬಂದಿಗಳು ಸಹಕರಿಸಿದರು.

46.90 ಲಕ್ಷ ರೂ.,ಖರ್ಚು:
1-10-2021ರಿಂದ 31-3-2022ರ ಆರು ತಿಂಗಳ ಅವಧಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 176 ಕಾಮಗಾರಿ ಆಗಿದೆ. ಇದಕ್ಕೆ 28,86,243 ರೂ.,ಕೂಲಿ ಹಾಗೂ 18,03,840 ರೂ.,ಸಾಮಾಗ್ರಿ ಮೊತ್ತ ಸೇರಿ ಒಟ್ಟು 46,90,083 ರೂ.ಖರ್ಚು ಆಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 2021-22ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಡಿ 20 ಕಾಮಗಾರಿ ಮಾಡಲಾಗಿದ್ದು ಇದಕ್ಕೆ 19,32,590 ರೂ.,ಹಾಗೂ 15ನೇ ಹಣಕಾಸು ಯೋಜನೆಯಡಿ 45,13,830 ರೂ.,ಖರ್ಚು ಆಗಿದೆ. ಕುಡಿಯುವ ನೀರು, ಬೀದಿದೀಪ,ಸ್ವಚ್ಛತೆ ನಿರ್ವಹಣೆಗೆ 14ನೇ ಹಣಕಾಸು ಯೋಜನೆಯಡಿ 11,27,697 ಹಾಗೂ 15ನೇ ಹಣಕಾಸು ಯೋಜನೆಯಡಿ 11,51,431 ರೂ.,ಖರ್ಚು ಆಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

LEAVE A REPLY

Please enter your comment!
Please enter your name here