ಇರ್ದೆ-ಬೆಟ್ಟಂಪಾಡಿ ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ನೂತನ ಕೇಂದ್ರ ಕಚೇರಿ ಕಟ್ಟಡದ ಉದ್ಘಾಟನೆ

0

ಪುತ್ತೂರು: ನೂತನವಾಗಿ ನಿರ್ಮಾಣಗೊಂಡಿರುವ ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕೇಂದ್ರ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭ ಜೂ. 24ರಂದು ನಡೆಯಿತು.
 
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ‘ಸಹಕಾರ ರತ್ನ’ ಡಾ| ಎಂ.ಎನ್, ರಾಜೇಂದ್ರಕುಮಾರ್ ಕೇಂದ್ರ ಕಚೇರಿ ಕಟ್ಟಡವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಮುಖ್ಯಮಂತ್ರಿಗಳೂ, ಮಾಜಿ ಕೇಂದ್ರ ಸಚಿವರೂ ಆಗಿರುವ ಸಂಸದ ಡಿ.ವಿ. ಸದಾನಂದ ಗೌಡ ಅವರು ರೈತ ಸಹಕಾರ ಭವನ ಮತ್ತು ಏಕರೂಪದ ಹೊಸ ತಂತ್ರಾಂಶವನ್ನು ಉದ್ಘಾಟಿಸಿದರು. ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಆಡಳಿತ ಮಂಡಳಿ ಸಭಾಂಗಣವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ‘ಸಹಕಾರ ರತ್ನ’ ಡಾ| ಎಂ.ಎನ್, ರಾಜೇಂದ್ರ ಕುಮಾರ್ ಅವರು ಕೇಂದ್ರ ಕಚೇರಿ ಕಟ್ಟಡವನ್ನು ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟನೆಗೈದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ನಾಮಫಲಕ ಅನಾವರಣಗೊಳಿಸಿದರು. ಕಂಪ್ಯೂಟರ್ ವಿಭಾಗದ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಎಸ್.ಬಿ. ಜಯರಾಮ ರೈ ನೆರವೇರಿಸಿದರು.
ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಬ್ಯಾಂಕ್ ನಿರ್ದೇಶಕ ಕರುಣಾಕರ ಶೆಟ್ಟಿ ಕೊಮ್ಮಂಡ, ಸಹಕಾರ ಇಲಾಖೆ ಸಹಾಯಕ ನಿಬಂಧಕಿ ತ್ರಿವೇಣಿ, ಬೆಟ್ಟಂಪಾಡಿ ಗ್ರಾಪಂ ಅಧ್ಯಕ್ಷೆ ಪವಿತ್ರಾ ಡಿ., ಬ್ಯಾಂಕ್ ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ರಾಮಯ್ಯ ರೈ, ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು.
ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ರಂಗನಾಥ ರೈ ಗುತ್ತು ಪ್ರಾಸ್ತಾವಿಕವಾಗಿ ಮಾತನಾಡಿದರು.

 

 

LEAVE A REPLY

Please enter your comment!
Please enter your name here