ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಸರಕಾರಿ ಪ್ರೌಢಶಾಲೆ ಪಾಪೆಮಜಲು ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ವಿಶ್ವ ಸಂಗೀತ ದಿನಾಚರಣೆ ಪಾಪೆಮಜಲು ಪ್ರೌಢಶಾಲೆಯಲ್ಲಿ ಜೂ.21ರಂದು ಶಾಲಾ ಮುಖ್ಯಗುರು ಮೋನಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾದ ಪಾಪೆಮಜಲು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣ ರೈ ಅವರು ಯೋಗದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಬಳಿಕ ಯೋಗದ ಪ್ರಾತ್ಯಕ್ಷಿಕೆ ನಡೆಸಲಾಯಿತು.
ಮುಖ್ಯ ಅತಿಥಿ ಶಿಕ್ಷಕ ಹರಿಪ್ರಸಾದ್ರವರು ಯೋಗ ದಿನದ ಬಗ್ಗೆ ಹಾಗೂ ಯೋಗದ ಮಹತ್ವವನ್ನು ತಿಳಿಸಿದರು. ಆ ಬಳಿಕ ವಿಶ್ವ ಸಂಗೀತ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ರೀತಿಯ ಹಾಡುಗಳನ್ನು ಹಾಡಿದರು. ಶಿಕ್ಷಕಿಯರಾದ ಪವಿತ್ರ ಹಾಗೂಇಂದಿರಾ ಭಾವಗೀತೆಗಳನ್ನು ಹಾಡಿದರು. ಸಿತಾರ ಶೆರಿನ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಶ್ರೀಕಾಂತ.ಟಿ.ಕೆ,ರಶ್ಮಿತಾ ರೈ.ಎಸ್ ಹಾಗೂ ಸಿತಾರ ಶೆರಿನ್ ಸಹಕರಿಸಿದ್ದರು.