ಜೂ.25: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವಠಾರದಲ್ಲಿ 8ನೇ ವರ್ಷದ ಸಾರ್ವಜನಿಕ ಶ್ರೀ ಶನಿಪೂಜೆ

0

ಪುತ್ತೂರು: ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿ ಮುಂಡೂರು ಇದರ ಆಶ್ರಯದಲ್ಲಿ ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವಠಾರದಲ್ಲಿ ಲೋಕ ಕಲ್ಯಾಣಾರ್ಥವಾಗಿ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ಉಪಸ್ಥಿತಿಯಲ್ಲಿ 8ನೇ ವರ್ಷದ ಸಾರ್ವಜನಿಕ ಶ್ರೀ ಶನಿಪೂಜೆ ಜೂ.25ರಂದು ಸಂಜೆ ಗಂಟೆ 5ರಿಂದ ನಡೆಯಲಿದೆ.

ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಯವರಿಂದ ಅರ್ಧ ಏಕಾಹ ಭಜನೆ ನಡೆಯಲಿದ್ದು ಸರೋಜಿನಿ ಶೆಟ್ಟಿ ನೇಸರಕಂಪ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸದಾಶಿವ ಶೆಟ್ಟಿ ಪಟ್ಟೆ ಉಪಸ್ಥಿತರಿರಲಿದ್ದಾರೆ.

ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಪುತ್ತೂರು ಅಂಬಿಕಾ ಸಮೂಹ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ವಹಿಸಲಿದ್ದು ನೆಹರೂನಗರ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರಾದ ಡಾ.ವಿಜಯ ಸರಸ್ವತಿ ಧಾರ್ಮಿಕ ಭಾಷಣ ಮಾಡಲಿದ್ದಾರೆ.

ಪರ್ಲಡ್ಕ ಶ್ರೀ ದುರ್ಗಾ ಕ್ಲಿನಿಕ್‌ನ ಡಾ.ಹರಿಕೃಷ್ಣ ಪಾಣಾಜೆ, ಶ್ರೀರಾಮ ಕನ್‌ಸ್ಟ್ರಕ್ಷನ್‌ನ ಇಂಜಿನಿಯರ್ ಪ್ರಸನ್ನ ಎನ್ ಭಟ್, ಪ್ರಗತಿಪರ ಕೃಷಿಕ ಆನಂದ ಪಿ ಭಂಡಾರಿ ಸೊರಕೆ, ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು, ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ಜೀಣೋದ್ಧಾರ ಸಮಿತಿಯ ಮುರಳೀಧರ ಭಟ್ ಬಂಗಾರಡ್ಕ, ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಪುರಂದರ ಗೌಡ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ರಾತ್ರಿ ಗಂಟೆ ೮ರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ವೈಭವ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಶನೀಶ್ವರ ಪೂಜಾ ಸಮಿತಿಯ ಅಧ್ಯಕ್ಷ ಸತೀಶ್ ಪೊನೋಣಿ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here