ಕೊಂಡಾಡಿಕೊಪ್ಪ ಸ.ಹಿ.ಪ್ರಾ.ಶಾಲೆಯಲ್ಲಿ ಸನ್ಮಾನ

0

ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪ ಇಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ವೀರೇಂದ್ರ ಗೌಡ ಏಂತಡ್ಕ ಮತ್ತು ಉಪಾಧ್ಯಕ್ಷ ರತ್ನ ಬಿ ಕೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಆಲಂಕಾರು ಗ್ರಾಮ ಪಂಚಾಯತ್ ಸದಸ್ಯೆ   ವಾರಿಜಾ ಕೆ ರವರು ಸನ್ಮಾನಿದರು .ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ ಕಮಿತ್ತಿಲು ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಲತಾ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪ್ರೇಮ ಬಿ ಸ್ವಾಗತಿಸಿ, ಸಹಶಿಕ್ಷಕ ಜಯಂತ ವೈ ವಂದಿಸಿದರು.

LEAVE A REPLY

Please enter your comment!
Please enter your name here