ಕಾಣಿಯೂರು: ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

0

ಕಾಣಿಯೂರು: ಯಕ್ಷಗಾನವು ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಯೊಂದಿಗೆ ಸಂಸ್ಕಾರಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಮಂಗಳೂರು ಆಕಾಶವಾಣಿಯ ಉದ್ಘೋಷಕಿ, ತುಳು ಸಾಹಿತ್ಯ ಅಕಾಡೆಮಿಯ ಸದಸ್ಯೆ ಸಿದ್ದಕಟ್ಟೆ ಮಲ್ಲಿಕಾ ಅಜಿತ್ ಶೆಟ್ಟಿಯವರು ಹೇಳಿದರು.

ಅವರು ಶ್ರೀ ನರಹರಿ ಯಕ್ಷಗಾನ ಕಲಾ ಕೇಂದ್ರದ ಆಶ್ರಯದಲ್ಲಿ ಕಾಣಿಯೂರು ಶ್ರಿ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ಯಕ್ಷಗಾನ ನಾಟ್ಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಣಿಯೂರು ಶ್ರಿ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ ವಹಿಸಿದ್ದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಕೇಂದ್ರೀಯ ಸಚಿವಾಲಯದ ನಿವೃತ್ತ ಉಪ ಕಾರ್ಯದರ್ಶಿ ಎಂ.ಎನ್.ಗೌಡ ಶುಭಹಾರೈಸಿದರು. ಶ್ರಿ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಕಾರ್ಯದರ್ಶಿ, ಬೆಳಂದೂರು ಗ್ರಾ.ಪಂ.ಸದಸ್ಯ ಜಯಂತ ಅಬೀರ, ನಾಟ್ಯಗುರು, ಕಟೀಲು ಮೇಳದ ಪ್ರಶಾಂತ್ ಶೆಟ್ಟಿ ನೆಲ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯಕ್ಷಮಿತ್ರ ಬಳಗದ ಹರಿಪ್ರಸಾದ್ ರೈ ಕಾಣಿಯೂರು, ಬಾಲಚಂದ್ರ ಅಬೀರ, ಜಗದೀಶ್ ಗೌಡ, ದೇವಿಕಾ ಕೋಡಂದೂರು, ಮೀರಾ ಬೆದ್ರಾಜೆ, ರಾಕೇಶ್ ಬನಾರಿ, ಯಶವಂತ ಬಾಕಿಲ, ಸೀತಾರಾಮ ಅನಿಲರವರು ಅತಿಥಿಗಳಿಗೆ ತಾಂಬೂಲ ನೀಡಿ ಗೌರವಿಸಿದರು. ಯಕ್ಷಗಾನ ಕಲಾ ಕೇಂದ್ರದ ಸಂಚಾಲಕರಾದ ಗೋಪಾಲಕೃಷ್ಣ ಪಟೇಲ್ ಚಾರ್ವಾಕರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ತಾ.ಪಂ.ಮಾಜಿ ಉಪಾಧ್ಯಕ್ಷ ಬಾಬು ಮಾದೋಡಿ ವಂದಿಸಿ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಂತ್ ವೈ ಕಾರ್ಯಕ್ರಮ ನಿರೂಪಿಸಿದರು. ಯಕ್ಷಮಿತ್ರ ಬಳಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here