ಜು. 3: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಘಟಕದ ನಿರ್ದೇಶಕರ ಆಯ್ಕೆಗೆ ಚುನಾವಣೆ

0

ಪುತ್ತೂರು : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಘಟಕದ 2022-27ನೇ ಸಾಲಿನ ಐದು ವರ್ಷಗಳ ಅವಧಿಗೆ ಕಾರ್ಯಕಾರಿ ಸಮಿತಿ ನಿರ್ದೇಶಕರ ಆಯ್ಕೆಗೆ ಜು. 3ರಂದು ಚುನಾವಣೆ ನಿಗದಿಯಾಗಿದ್ದು ಚುನಾವಣಾ ವೇಳಾಪಟ್ಟಿ ಪ್ರಕಟಣೆಗೊಂಡಿದೆ. ಪುತ್ತೂರು ಮತ್ತು ಕಡಬ ತಾಲೂಕಿಗೆ ಪ್ರತ್ಯೇಕ ಚುನಾವಣೆ ನಡೆಯಲಿದ್ದು ಜೂ.27ರಿಂದ ಚುನಾವಣಾ ಪ್ರಕ್ರಿಯೆ ನಡೆಯಲಿದೆ.

ಜೂ.27ರಿಂದ ಜೂ.30 ರ ಸಂಜೆ 4 ಗಂಟೆಯವರೆಗೆ ನಾಮಪತ್ರಗಳ ವಿತರಣೆ ನಡೆಯಲಿದೆ. ಚುನಾವಣೆಯಲ್ಲಿ ಸ್ಪರ್ಧಿಸ ಬಯಸುವ ಸದಸ್ಯರ ಉಮೇದುವಾರಿಕೆ ಅರ್ಜಿಗಳನ್ನು ಚುನಾವಣಾಧಿಕಾರಿಗಳಿಗೆ ಜೂ.30ರ ಸಂಜೆ 5 ಗಂಟೆಯವರಗೆ ಸಲ್ಲಿಸಬಹುದು. ಜೂ.30 ರ ಸಂಜೆ 5.30ರಿಂದ ನಾಮಪತ್ರ ಪರಿಶೀಲನೆ ನಡೆದು ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಜು.1 ರಂದು ಸಂಜೆ 4 ಗಂಟೆಯವರೆಗೆ ನಾಮಪತ್ರ ವಾಪಸ್ಸು ಪಡೆಯಲು ಅವಕಾಶವಿದೆ. ಜು.1ರಂದು ಸಂಜೆ 5.30ರ ನಂತರ ನಾಮಪತ್ರ ವಾಪಸ್ಸು ಪಡೆದವರ ಪಟ್ಟಿ ಪ್ರಕಟಣೆ ಮಾಡಲಾಗುತ್ತದೆ. ನಾಮಪತ್ರ ಪರಿಶೀಲನೆ ಬಳಿಕ ಚುನಾಚಣಾ ಕಣದಲ್ಲಿ ಅಂತಿಮವಾಗಿ ಉಳಿದ ಉಮೇದುವಾರರ ಹೆಸರು ಪ್ರಕಟಿಸಲಾಗುತ್ತದೆ.

ಚುನಾವಣೆ, ಮತಎಣಿಕೆ : ಪುತ್ತೂರು ತಾಲೂಕಿಗೆ ಸಂಬಂಧಿಸಿದಂತೆ ಪುತ್ತೂರು ನಗರ ಡಾ|ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ ಮತ್ತು ಕಡಬ ತಾಲೂಕಿಗೆ ಸಂಬಂಧಿಸಿದಂತೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಜು.3ರಂದು ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆ 4.30ರ ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಪುತ್ತೂರು ತಾಲೂಕಿಗೆ ಚುನಾವಣಾಧಿಕಾರಿಯಾಗಿ ಇರ್ದೆಉಪ್ಪಳಿಗೆ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ನಾರಾಯಣ ಕೆ. (9449903674) ಹಾಗೂ ಕಡಬ ತಾಲೂಕು ಚುನಾವಣಾಧಿಕಾರಿಯಾಗಿ ದೋಳ್ಪಾಡಿ ಸರಕಾರಿ ಪ್ರೌಢಶಾಲೆಯ ಶಶಿಧರ(9008909697) ನೇಮಕಗೊಂಡಿದ್ದು ಆಸಕ್ತರು ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here