ನೆಲ್ಯಾಡಿ: ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಮಹಿಳೆಯೋರ್ವರ ಮೃತದೇಹ ಅವರ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ಸಜೀವ ಎಂಬವರ ಪತ್ನಿ ರೋಸ್ಲಿ(42ವ.)ಎಂಬವರ ಮೃತದೇಹ ಜೂ.24ರಂದು ಬೆಳಿಗ್ಗೆ ಅವರ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಮೃತ ರೋಸ್ಲಿಯವರ ಪುತ್ರಿ ಸ್ನೇಹಾ ಎಸ್. ರವರು ನೀಡಿರುವ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.