ಪುತ್ತೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಇವರು 2021-22ನೇ ಸಾಲಿನಲ್ಲಿ ಎಂಟನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ನಡೆಸಿದ ಎನ್.ಎಮ್.ಎಮ್.ಎಸ್ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಅಪೂರ್ವ, ಶಿಝ ಅಝೀಝ್ ಬೊಳ್ವಾರ್, ನಂದಿತಾ, ನಿಶ್ಮಿತಾ ಕೆ ಮತ್ತು ಸ್ನೇಹ ಎಂ.ಡಿರವರು ತೇರ್ಗಡೆಯಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ರೋಸ್ಲಿನ್ ಲೋಬೋರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.