ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ, ಅಕ್ರಮ ಸಾಗಾಟ ವಿರೋಧಿ ದಿನ -53  ಕೆ.ಜಿ ಗಾಂಜಾ, 120 ಗ್ರಾಂ ಹೆರಾಯಿನ್ ಮಾದಕ ವಸ್ತುಗಳ ವಿಲೇವಾರಿ

0

ಪುತ್ತೂರು: ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ಪೈಕಿ ಪ್ರಸ್ತುತ ಠಾಣೆಗಳಲ್ಲಿ ವಿಲೇವಾರಿಯ ಸಲುವಾಗಿ ಬಾಕಿ ಇರುವ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶ ಪಡೆದ ಜೂ. 26ರಂದು ವಿಲೇವಾರಿ ಗೊಳಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿಯ ಅಧ್ಯಕ್ಷ ಸೋನಾವಣೆ ಋಷಿಕೇಶ್ ಭಗವಾನ್ ಅವರ ನೇತೃತ್ವದಲ್ಲಿ ವಿವಿಧ ಠಾಣೆಯ 11  ಪ್ರಕರಣಗಳಲ್ಲಿ ಸುಮಾರು 53 ಕೆ.ಜಿ 128 ಗ್ರಾಂ ಮಾದಕ ವಸ್ತು ಗಾಂಜಾ ಮತ್ತು ಸುಮಾರು 120 ಗ್ರಾಮ ಹೆರಾಯಿನ್ ಅನ್ನು ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೇ ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್‌ಮೆಂಟ್ ಲಿ ಅವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು. ಈ ಸಂದರ್ಭ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ್, ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here