ನಿಡ್ಪಳ್ಳಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಮಹಾಸಭೆ ಉಚಿತ ಪುಸ್ತಕ ವಿತರಣೆ

0

ನಿಡ್ಪಳ್ಳಿ; ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಹಾಗೂ ಬಿಲ್ಲವ ಗ್ರಾಮ ಸಮಿತಿ ನಿಡ್ಪಳ್ಳಿ ಇದರ ವತಿಯಿಂದ ನಿಡ್ಪಳ್ಳಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.26 ರಂದು ಬೆಟ್ಟಂಪಾಡಿ ಸಮುದಾಯ ಭವನದಲ್ಲಿ ನಡೆಯಿತು. ನಡೆಯಿತು.
 
ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಕಾರ್ಯದರ್ಶಿ ನಾಗೇಶ್ ಬಲ್ನಾಡು ದೀಪ ಬೆಳಗಿಸಿ ಉದ್ಘಾಟಿಸಿದರು. ಮೂರ್ತೆದಾರರ ಸಹಕಾರಿ ಸಂಘ ಕುಂಬ್ರ ಇದರ ಅಧ್ಯಕ್ಷ ಅರ್.ಸಿ.ನಾರಾಯಣ ರೆಂಜ, ಪುತ್ತೂರು ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಕಲಾ ಮುಕ್ವೆ, ನಿಡ್ಪಳ್ಳಿ ಬಿಲ್ಲವ ಸಂಘದ ಗೌರವಾಧ್ಯಕ್ಷ ಹರೀಶ್ ಕುಮಾರ್ ದೇವಸ್ಯ, ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ.ಟಿ.ಮಹೇಶ್ಚಂದ್ರ ಸಾಲಿಯಾನ್ ನಡುಬೈಲು ಗುತ್ತು, ಪುತ್ತೂರು ಬಿಲ್ಲವ ಸಂಘದ ಜತೆ ಕಾರ್ಯದರ್ಶಿ ಚಿದಾನಂದ ಸುವರ್ಣ,ಪ್ರಗತಿಪರ ಕೃಷಿಕ ಸಂಜೀವ ಪೂಜಾರಿ ಕಾನ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ತುಳಸಿ ಹರೀಶ್ ಪೂಜಾರಿ ಕುಕ್ಕುಪುಣಿ,ಆರ್ಯಾಪು ವಲಯ ಸಂಚಾಲಕ ರಾಜೇಶ್ ಪೂಜಾರಿ ಆರ್ಲಪದವು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಪ್ಪ ಪೂಜಾರಿ ನುಳಿಯಾಲು ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿಡ್ಪಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ಸಂತೋಷ ಕಾನ ಅಧ್ಯಕ್ಷತೆ ವಹಿಸಿದ್ದರು. 
 
ಲಿಖಿತಾ ಕರ್ನಪ್ಪಾಡಿ ಪ್ರಾರ್ಥಿಸಿ,  ಸುರಕ್ಷಾ ಕರ್ನಪ್ಪಾಡಿ ಸ್ವಾಗತಿಸಿ ನಿಡ್ಪಳ್ಳಿ ಗ್ರಾಮ ಸಮಿತಿ ಕಾರ್ಯದರ್ಶಿ ಸಂತೋಷ ಕರ್ನಪ್ಪಾಡಿ ವರದಿ ವಾಚಿಸಿದರು. ನಿಡ್ಪಳ್ಳಿ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಜಯಲತಾ ಕರ್ನಪ್ಪಾಡಿ ವಂದಿಸಿದರು. ಶಿಕ್ಷಕ ರಾಧಾಕೃಷ್ಣ ಕೋಡಿ ಕಾರ್ಯಕ್ರಮ ನಿರೂಪಿಸಿದರು. ಪುತ್ತೂರು ಬಿಲ್ಲವ ಸಂಘದ ಪದಾಧಿಕಾರಿಗಳು, ನಿಡ್ಪಳ್ಳಿ ಬಿಲ್ಲವ ಸಂಘದ ಪದಾಧಿಕಾರಿಗಳು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸುಮಾರು 65 ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಿಸಲಾಯಿತು. ಅಲ್ಲದೆ ಸುಮಾರು 61 ಬಾರಿ ರಕ್ತದಾನ ಮಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ.ಟಿ.ಮಹೇಶ್ಚಂದ್ರ ಸಾಲಿಯಾನ್ ಇವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. 

LEAVE A REPLY

Please enter your comment!
Please enter your name here