ನಾಣಿಲ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಮತ್ತು ಕಾಣಿಯೂರು ಗ್ರಾಮ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಯೋಗ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮಾತೃಶ್ರೀಯವರಾದ ಪೂವಕ್ಕ ಕರಂದ್ಲಾಜೆ ಉದ್ಘಾಟಿಸಿದರು. ತರಬೇತುದಾರ ಸಂತೋಷ್ ಯೋಗಾಭ್ಯಾಸದ ಮಹತ್ವವನ್ನು ತಿಳಿಸಿದರು. ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ ದರ್ಖಾಸು, ಉಪಾಧ್ಯಕ್ಷ ಗಣೇಶ್ ಉದನಡ್ಕ, ನಾಣಿಲ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ತೇಜ ಕುಮಾರಿ ಉದ್ಲಡ್ಡ, ಸುಲೋಚನಾ ಮಿಯೊಳ್ಪೆ , ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಾಜಿದ ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಪದ್ಮಯ್ಯ ಗೌಡ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here