ನಾಣಿಲ ಶಾಲೆಯಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಮತ್ತು ಕಾಣಿಯೂರು ಗ್ರಾಮಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ವೈದ್ಯಾಧಿಕಾರಿಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜರುಗಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಲಿತಾ ದರ್ಖಾಸು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೈದ್ಯಾಧಿಕಾರಿ ಡಾ. ಸಾಜಿದ ಅವರು ರೋಗಲಕ್ಷಣಗಳು, ರೋಗ ಹರಡುವಿಕೆ, ಸ್ವಚ್ಛತೆ, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ನಾಣಿಲ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿಯವರು ಮಕ್ಕಳಿಗೆ ವೈದ್ಯಕೀಯ ತಪಾಸಣೆಯ ಅಗತ್ಯತೆ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಉದನಡ್ಕ, ಸದಸ್ಯರಾದ ತೇಜಕುಮಾರಿ ಉದ್ಲಡ್ಡ, ಸುಲೋಚನಾ ಮಿಯೊಳ್ಪೆ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಪುಷ್ಪಲತಾ, ಶಾಲಾ ಮುಖ್ಯಗುರು ಪದ್ಮಯ್ಯಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕ ವೃಂದ ಭಾಗವಹಿಸಿದ್ದರು. ಶಾಲಾ ಮುಖ್ಯಗುರು ಪದ್ಮಯ್ಯ ಗೌಡ ಸ್ವಾಗತಿಸಿ ಗೌರವ ಶಿಕ್ಷಕಿ ಶ್ವೇತಾ ವಂದಿಸಿದರು. ಶಿಕ್ಷಕಿ ಲೀನಾ ಲಸ್ರಾದೊ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here