ನೇರಳಕಟ್ಟೆ: ಯುವಕನಿಂದ ಮಹಿಳೆಗೆ ಚೂರಿ ಇರಿತ – ಗಾಯಾಳುವಿನ ಸ್ಥಿತಿ ಗಂಭೀರ

0

ವಿಟ್ಲ: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ್ವರಿಗೆ ಯುವಕನೋರ್ವ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನೆಟ್ಲ ಮುಡ್ನೂರು ಗ್ರಾಮದ ನೇರಳಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಿಂದಾಗಿ ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬವರು ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

 

ಚೂರಿ ಇರಿತದಿಂದಾಗಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳು‌ ಮಹಿಳೆ ವಿವಾಹಿತರಾಗಿದ್ದು, ಆಸ್ತಿ ವಿಚಾರಕ್ಕೆ ಸಂಬಂಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

LEAVE A REPLY

Please enter your comment!
Please enter your name here