ಕೊಂಬಾರು: ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕುಮಾರಪುರ ಪ್ರತಿಷ್ಠಾನದ ವತಿಯಿಂದ ಪ್ರತಿಭಾ ಪುರಸ್ಕಾರ-ಸನ್ಮಾನ

0

ಕಡಬ: ಕೊಂಬಾರು ಗ್ರಾಮದ ಮೊಗೇರಡ್ಕ ದ.ಕ.ಜಿ.ಪ.ಹಿ.ಪ್ರಾ. ಶಾಲೆ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಕುಮಾರಪುರ ಪ್ರತಿಷ್ಠಾನ ಮತ್ತು ಕುಮಾರಪುರ ಪ್ರಕಾಶನ ಕೊಂಬಾರು ಇವರ ಸಂಯುಕ್ತ ಆಶ್ರಯದಲ್ಲಿ ಕೊಂಬಾರು ಮತ್ತು ಸಿರಿಬಾಗಿಲು ಗ್ರಾಮ ವ್ಯಾಪ್ತಿಯಲ್ಲಿ 2021-22 ಶೈಕ್ಷಣಿಕ ಸಾಲಿನ 7ನೇ, 10ನೇ ಹಾಗೂ 12 ನೇ ತರಗತಿಗಳ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಕುಮಾರಪುರ ಪ್ರತಿಷ್ಠಾನದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ದ.ಕ .ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮೊಗೇರಡ್ಕದಲ್ಲಿ ಜೂ.27ರಂದು ನಡೆಯಿತು.

ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು:

ದ್ವಿತೀಯ ಪಿಯುಸಿಯಲ್ಲಿ 579 ಅಂಕ ಪಡೆದ ಎಸ್.ಎಸ್.ಪಿ.ಯು.ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ವಿದ್ಯಾರ್ಥಿನಿ  ಊರ್ವಿ ಜಿ. ಮತ್ತು 10ನೇ ತರಗತಿಯಲ್ಲಿ 616 ಅಂಕ ಗಳಿಸಿದ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇಲ್ಲಿನ ವಿದ್ಯಾರ್ಥಿ  ಆಶಿಕಾ ಬಿ. ಇವರಿಗೆ ಪ್ರತಿಷ್ಠಾನದ ವತಿಯಿಂದ ರೂ.7000 ಪ್ರೋತ್ಸಾಹಧನ, ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗೂ 7ನೇ ತರಗತಿಯಲ್ಲಿ 571 ಅಂಕ ಪಡೆದ ಮೊಗೇರಡ್ಕ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಲಾವಣ್ಯ ಕೆ ಇವರಿಗೆ ಪ್ರತಿಷ್ಠಾನದ ವತಿಯಿಂದ ರೂ.3000 ಪ್ರೋತ್ಸಾಹಕ ಧನ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಪ್ರತಿಭಾ ಪುರಸ್ಕಾರ ಸಭೆಯು ಶಾಲಾಭಿವೃಧ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾಮಕೃಷ್ಣ ಗೌಡ ಹೊಳ್ಳಾರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರತಿಷ್ಠಾನದ ಸಂಚಾಲಕರಾದ ಕೆ.ಎನ್.ಪ್ರಸನ್ನ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಷ್ಠಾನದ ಸಂಚಾಲಕ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಪ್ರವೀಣ್ ಕುಮಾರ್, ಪ್ರಾಕ್ತನ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕಲ್ಲರ್ತನೆ, ಅರಣ್ಯ ಸಮಿತಿಯ ಅಧ್ಯಕ್ಷ ಶಶಿಧರ್ ಬೊಟ್ಟಡ್ಕರವರುಗಳು ಸಂಧರ್ಬೋಚಿತವಾಗಿ ಮಾತನಾಡಿದರು. ಸಮಿತಿಯ ಉಪಾಧ್ಯಕ್ಷೆ ಸುಮಿತ್ರಾ ಭಾಸ್ಕರ್ ಕೂತೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಗುರು ಜಯಂತಿ ಅವರು ಸ್ವಾಗತಿಸಿದರು. ಶಿಕ್ಷಕಿ ವಿನುತಾ ಬಾರ್ಯ ವಂದಿಸಿದರು. ಹಿರಿಯ ಶಿಕ್ಷಕಿ ಪ್ರಮೀಳಾರವರು ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಪುಟಾಣಿಗಳಿಗೆ ಲೇಖನ ಸಾಮಗ್ರಿಗಳನ್ನು ಪ್ರತಿಷ್ಠಾನದ ವತಿಯಿಂದ ವಿತರಿಸಲಾಯಿತು. ಗಣ್ಯರಿಗೆ, ಶಾಲಾ ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರತಿಷ್ಠಾನದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here