ಪಾಣಾಜೆ; ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಕಾಣುರಾಯಣ ಚಲನಚಿತ್ರ ಮೂಲಕ ಅರಿವು ಕಾರ್ಯಕ್ರಮ

0

ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಇದರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ  ಬೆಟ್ಟಂಪಾಡಿ ವಲಯದ ಪಾಣಾಜೆ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಯೋಜನೆಯ ಕಾರ್ಯಕ್ರಮದ ಬಗ್ಗೆ ತಿಳುವಳಿಕೆ ಮೂಡಿಸಲು ನಿರ್ಮಿಸಿದ ಚಲನಚಿತ್ರ ಕಾಣುರಾಯಣ  ಪ್ರದರ್ಶನ ಕಾರ್ಯಕ್ರಮ ಜೂ.29 ರಂದು ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭಾವನದಲ್ಲಿ ನಡೆಯಿತು.
ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ದೀಪ ಬೆಳಗಿಸಿ ಉದ್ಘಾಟಿಸಿದರು.  ಮುಖ್ಯ ಅತಿಥಿ ದ.ಕ ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್ ಮಾತನಾಡಿ ಜ್ಞಾನ ವಿಕಾಸ ಕಾರ್ಯಕ್ರಮ ಮಹಿಳೆಯರಲ್ಲಿ ಶಿಸ್ತು ಬದ್ಧ ಕಾರ್ಯಕ್ರಮದ ಜೊತೆಗೆ ಮಹಿಳಾ ಸಬಲೀಕರಣ ಮಾಡಿ ಮಹಿಳೆಯರಿಗೆ ಧೈರ್ಯ ತುಂಬುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಹೇಳಿ ಶುಭ ಹಾರೈಸಿದರು.
ಜ್ಞಾನ ವಿಕಾಸ ತಾಲೂಕು ಸಮನ್ವಯಾಧಿಕಾರಿ ಅಶ್ವಿನಿ ಪ್ರಾಸ್ತಾವಿಕವಾಗಿ ಮಾತನಾಡಿ ಮಾಧ್ಯಮದ ಮೂಲಕ ಜನರಿಗೆ ಮಾಹಿತಿ ನೀಡಿದಾಗ ಕಾರ್ಯಕ್ರಮ ಮತ್ತಷ್ಟು ಪರಿಣಾಮಕಾರಿಯಾಗುತ್ತದೆ.ಆದುದರಿಂದ    ಇಂತಹ ಚಲನಚಿತ್ರ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ವಲಯ ಮೆಲ್ವೀಚಾರಕ ಶಿವಪ್ಪ. ಎಂ, ಸೇವಾ ಪ್ರತಿನಿಧಿ ಮಮತ, ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ಪಾಣಾಜೆ ಒಕ್ಕೂಟದ ಉಪಾಧ್ಯಕ್ಷೆ ಭವಾನಿ ಸ್ವಾಗತಿಸಿ ಸೇವಾ ಪ್ರತಿನಿಧಿ ಜಯಶ್ರೀ ವಂದಿಸಿದರು. ಸೇವಾ ಪ್ರತಿನಿಧಿ ಭಾರತಿ ಉಪ್ಪಳಿಗೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here